ನವದೆಹಲಿ:ಸೆಂಟ್ರಲ್ ವಿಸ್ಟಾ ಮರು ಅಭಿವೃದ್ಧಿ ಯೋಜನಯಡಿ ನಿರ್ವಣವಾಗಿರುವ ಸಂಸತ್ತಿನ ಹೊಸ ಕಟ್ಟಡ ಮೇ 28 ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸುತ್ತಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನೂತನ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ. ಹೊಸ ಸಂಸತ್ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಹೊಸ ಕಟ್ಟಡವು ಸ್ವಾವಲಂಬಿ ಭಾರತದ ಚೈತನ್ಯವನ್ನು ಸಂಕೇತಿಸುತ್ತದೆ ಎಂದು ಲೋಕಸಭಾ ಕಾರ್ಯಾಲಯ ಈ ಸಂದರ್ಭದಲ್ಲಿ ತಿಳಿಸಿದೆ.
ಇದನ್ನೂ ಓದಿ:ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ; 20ರ ಮಧ್ಯಾಹ್ನ 12.30 ಕ್ಕೆ ಹೊಸ ಸರ್ಕಾರ ಅಸ್ತಿತ್ವಕ್ಕೆ
ಜುಲೈನಲ್ಲಿ ಆರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನವನ್ನು ಹೊಸ ಭವನದಲ್ಲಿ ಆಯೋಜಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಈ ವರ್ಷದ ಕೊನೆಯಲ್ಲಿ ನಡೆಯಬೇಕಿರುವ ಜಿ-20 ದೇಶಗಳ ಸ್ಪೀಕರ್​​ಗಳ ಸಭೆಯನ್ನು ಹೊಸ ಕಟ್ಟಡದಲ್ಲಿ ಆಯೋಜಿಸುವ ಸಂಭವವಿದೆ.
2021ರ ಜನವರಿಯಲ್ಲಿ ತ್ರಿಕೋನಾಕೃತಿಯ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಿತ್ತು. 75ನೇ ಸ್ವಾತಂತ್ರ್ಯೋತ್ಸವದ ಹೊತ್ತಿಗೆ ಅಂದರೆ 2022ರ ಆಗಸ್ಟ್​ನಲ್ಲಿ ಮುಗಿಸುವ ಯೋಜನೆಯಿತ್ತು. ಆದರೆ, 9 ತಿಂಗಳು ವಿಳಂಬವಾಗಿದೆ.
ಇದನ್ನೂ ಓದಿ:ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ… ಮತ್ತೆ ಪುಟಿದೇಳುತ್ತೇವೆ: ಬಸವರಾಜ ಬೊಮ್ಮಾಯಿ‌
ಹೊಸ ಸಂಸತ್ ಭವನಕ್ಕೆ ಮೂರು ಮುಖ್ಯ ದ್ವಾರಗಳಿದ್ದು ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ಕರ್ಮ ದ್ವಾರ ಎಂದು ಹೆಸರಿಸಲಾಗಿದೆ. ಸಂಸದರು, ವಿಐಪಿಗಳು ಮತ್ತು ಸಂದರ್ಶಕರಿಗಾಗಿ ಪ್ರತ್ಯೇಕ ಪ್ರವೇಶ ದ್ವಾರಗಳಿರುತ್ತವೆ. 64,500 ಚದರ ಅಡಿ ವಿಸ್ತೀರ್ಣದಲ್ಲಿ ನಾಲ್ಕಂತಸ್ತಿನ ಕಟ್ಟಡವನ್ನು ನಿರ್ವಿುಸಲಾಗಿದೆ. 1,224 ಸಂಸದರಿಗೆ ಆಸನ ವ್ಯವಸ್ಥೆ ಕಲ್ಪಿಸಬಹುದು. ಅಂದಾಜು 970 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಭವನ ನಿರ್ವಣವಾಗಿದೆ. ಟಾಟಾ ಪ್ರಾಜೆಕ್ಟ್ಸ್ ನಿರ್ವಣದ ಗುತ್ತಿಗೆ ಪಡೆದಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 1 =
Remember me
