ಜೈಪುರ:ಅರ್ಥ ವ್ಯವಸ್ಥೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಯಾದ ಜ್ಞಾನವಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ರಾಜಸ್ಥಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು ಹಳೆಯ ಮಾನದಂಡಗಳನ್ನು ಉಪಯೋಗಿಸುತ್ತಿರುವುದರಿಂದ ಭಾರತದ ಒಟ್ಟು ದೇಶಿಯ ಉತ್ಪನ್ನ(ಜಿಡಿಪಿ) ಶೇ 2.5ರ ಮಂದಗತಿಯ ಬೆಳವಣಿಗೆಯಲ್ಲಿ ಸಾಗುತ್ತಿದೆ. ಈ ಮೂಲಕ ಪ್ರಧಾನಿ ಮೋದಿ ಜಾಗತಿಕ ಮಟ್ಟದಲ್ಲಿ ಭಾರತದ ಚಿತ್ರಣವನ್ನು ನಾಶ ಮಾಡುತ್ತಿದ್ದಾರೆ ಎಂದು ರಾಹುಲ್​​ ಗಾಂಧಿ ಆರೋಪಿಸಿದ್ದಾರೆ.
ಯುಪಿಎ ಅವಧಿಯಲ್ಲಿ ಭಾರತದ ಜಿಡಿಪಿ ಶೇ. 9 ರಷ್ಟಿತ್ತು. ಇಡೀ ವಿಶ್ವವೇ ನಮ್ಮತ್ತ ತಿರುಗಿ ನೋಡುತ್ತಿತ್ತು ಎಂದಿರುವ ರಾಹುಲ್​, ಬಹುಶಃ ಪ್ರಧಾನಿ ಮೋದಿ ಆರ್ಥಶಾಸ್ತ್ರ ಅಧ್ಯಯನ ಮಾಡದೇ ಇರಬಹುದು ಅಥವಾ ಅರ್ಥ ಮಾಡಿಕೊಳ್ಳದೇ ಇರಬಹುದು, ಇದರಿಂದಲೇ ಆರ್ಥಿಕತೆ ಮಂದಗತಿಯಲ್ಲಿದೆ ಎಂದು ದೂರಿದ್ದಾರೆ.
ಪ್ರಧಾನಿ ಮೋದಿಗೆ ಜಿಎಸ್​ಟಿ ಅಂದರೆ ಏನು ಎಂಬುದು ಸಹ ತಿಳಿದಿಲ್ಲ. ನೋಟ್​ ಬ್ಯಾನ್ ಮಾಡಿ ಏನು ಪ್ರಯೋಜನ ಪಡೆದರು. ನೋಟ್​ ಬ್ಯಾನ್​ನಿಂದ ಒಳ್ಳೆಯದಕ್ಕಿಂತ ತೊಂದರೆಯೇ ಹೆಚ್ಚಾಯಿತು ಎಂದು 8 ವರ್ಷದ ಬಾಲಕ ಕೂಡ ಹೇಳುತ್ತಾನೆ ಎಂದು ಜರಿದರು.(ಏಜೆನ್ಸೀಸ್​)​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
