ಭೋಪಾಲ್​​:ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ನಮೀಬಿಯಾದಿಂದ ಭಾರತಕ್ಕೆ ಆಗಮಿಸಿದ 8 ಚೀತಾಗಳಲ್ಲಿ ಎರಡು ಚೀತಾಗಳ ಕ್ವಾರಂಟೈನ್​ ಅವಧಿ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವುಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದ ವಿಶಾಲ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಯಿತು.
ಎರಡು ಚೀತಾಗಳನ್ನು ಬಿಡುಗಡೆ ಮಾಡಿದ ವಿಡಿಯೋವನ್ನು ಪ್ರಧಾನಿ ಮೋದಿ ಅವರು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡು ಖುಷಿ ವ್ಯಕ್ತಪಡಿಸಿದ್ದಾರೆ. ಎರಡು ಚೀತಾಗಳು ಕಡ್ಡಾಯ ಕ್ವಾರಂಟೈನ್​ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಇಂದು ಅವುಗಳನ್ನು ವಿಶಾಲ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ಇನ್ನುಳಿದ ಆರು ಚೀತಾಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು. ಖುಷಿಯಾದ ಸಂಗತಿ ಏನೆಂದರೆ, ಎಲ್ಲ ಚೀತಾಗಳು ಆರೋಗ್ಯಯುತವಾಗಿದ್ದು, ಈ ಪರಿಸರಕ್ಕೆ ಚೆನ್ನಾಗಿ ಹೊಂದಿಕೊಂಡಿವೆ ಎಂದು ತಿಳಿಸಿದ್ದಾರೆ.
Great news! Am told that after the mandatory quarantine, 2 cheetahs have been released to a bigger enclosure for further adaptation to the Kuno habitat. Others will be released soon. I’m also glad to know that all cheetahs are healthy, active and adjusting well. 🐆pic.twitter.com/UeAGcs8YmJ
— Narendra Modi (@narendramodi)November 6, 2022

ಕುನೋ ರಾಷ್ಟ್ರೀಯ ಉದ್ಯಾವನದ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‌ಒ) ಪ್ರಕಾಶ್ ಕುಮಾರ್ ವರ್ಮಾ ಮಾತನಾಡಿದ್ದು, ಎರಡು ಚಿರತೆಗಳನ್ನು ಶನಿವಾರದಂದು ಕ್ವಾರಂಟೈನ್ ವಲಯಗಳಿಂದ ವಿಶಾಲ ಆವರಣಕ್ಕೆ ಬಿಡುಗಡೆ ಮಾಡಲಾಗಿದೆ. ಉಳಿದ ಆರು ಚಿರತೆಗಳನ್ನು ಸಹ ಹಂತ ಹಂತವಾಗಿ ಬಿಡಲಾಗುವುದು ಎಂದಿದ್ದಾರೆ.
ಅಂದಹಾಗೆ ಸೆ.17ರಂದು ನಮೀಬಿಯಾ ದೇಶದಿಂದ 8 ಚೀತಾಗಳನ್ನು ಭಾರತಕ್ಕೆ ಕರೆತರಲಾಯಿತು. 8ರಲ್ಲಿ 5 ಹೆಣ್ಣು ಮತ್ತು 3 ಗಂಡು ಚೀತಾಗಳಿವೆ. ನಮೀಬಿಯಾ ರಾಜಧಾನಿ ವಿಂಡ್ಹೋಕ್​ನಿಂದ ವಿಶೇಷವಾಗಿ ಡಿಸೈನ್​ ಮಾಡಲಾದ ಹುಲಿ ಮುಖದ ಬಿ-747 ಜಂಬೋ ಜೆಟ್​ನಿಂದ ಚೀತಾಗಳನ್ನು ಕರೆತರಲಾಯಿತು. ಅವುಗಳನ್ನು ಪ್ರಧಾನಿ ಮೋದಿ ಅವರು ತಮ್ಮ ಜನ್ಮದಿನದಂದೇ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾವನಕ್ಕೆ ಬಿಟ್ಟರು. 70 ವರ್ಷಗಳ ಹಿಂದೆಯೇ ಅಳಿದು ಹೋಗಿದ್ದ ಚೀತಾ ಸಂತತಿಯನ್ನು ಮರುಸ್ಥಾಪಿಸುವ ಉದ್ದೇಶದಿಂದ ಭಾರತಕ್ಕೆ ಚೀತಾಗಳನ್ನು ಕರೆತರಲಾಗಿದೆ. ಇದಕ್ಕಾಗಿ ಪ್ರಾಜೆಕ್ಟ್​ ಚೀತಾ ಹೆಸರಿನಲ್ಲಿ ಭಾರತವು ನಮೀಬಿಯಾದೊಂದಿಗೆ ಒಪ್ಪಂದ ಮಾಡಿಕೊಂಡಿದೆ.(ಏಜೆನ್ಸೀಸ್​)
ಬೇಡ ಅಂದರೂ ಕೇಳಲಿಲ್ಲ ಅದಕ್ಕೆ ಕೊಲೆ ಮಾಡಿದೆ: ಹೆತ್ತ ಮಗಳನ್ನೇ ಬರ್ಬರವಾಗಿ ಹತ್ಯೆಗೈದ ತಂದೆ

ಯುವತಿ ಮೇಲೆ ಆ್ಯಸಿಡ್​ ದಾಳಿ ಮಾಡಿದ್ದ ಆ್ಯಸಿಡ್​ ನಾಗನಿಗೆ ವಿಧಿಯಿಂದಲೇ ಘೋರ ಶಿಕ್ಷೆ! ನೋವಿನಿಂದ ನರಳಾಟ

ಭಾವಿ ಪತಿಯ ಮೊದಲ ಮದುವೆಯಲ್ಲಿ ಹನ್ಸಿಕಾರ ಭರ್ಜರಿ ಡಾನ್ಸ್​! ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
