ಹೊಸದಿಲ್ಲಿ:ಫೆಬ್ರವರಿ 13-14ರಂದು ಯುನೈಟೆಡ್ ಅರಬ್ ಎಮಿರೇಟಸ್ಸ್​​ಗೆ (ಯುಎಇ) ಅಧಿಕೃತ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಈ ಸಂದರ್ಭದಲ್ಲಿ ಅಬುಧಾಬಿಯ ಮೊದಲ ಅತೀ ದೊಡ್ಡ ಹಿಂದೂ ದೇವಾಲಯವಾದ ಬಿಎಪಿಎಸ್​ (BAPS) ಮಂದಿರವನ್ನು ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ:Gold, Silver Price; ಚಿನ್ನ, ಬೆಳ್ಳಿ ಬೆಲೆ ಮತ್ತಷ್ಟು ಇಳಿಕೆ.. ಆಭರಣ ಖರೀದಿಗೆ ಇದೇ ಒಳ್ಳೆ ಟೈಂ ನೋಡಿ
ಇದು 2015ರಿಂದ ಯುಎಇಗೆ ಮೋದಿಯವರ ಏಳನೇ ಭೇಟಿಯಾಗಿದ್ದು, ಕಳೆದ ಎಂಟು ತಿಂಗಳಲ್ಲಿ ಮೂರನೇ ಭೇಟಿಯಾಗಿದೆ. ದುಬೈಗೆ ಆಗಮಿಸಿದ ಬಳಿಕ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿರುವ ಪ್ರಧಾನಿ, ಉಭಯ ನಾಯಕರು ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಆಳಗೊಳಿಸಲು, ವಿಸ್ತರಿಸಲು ಮತ್ತು ಬಲಪಡಿಸಲು ಹಾಗೂ ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಮಾರ್ಗಗಳನ್ನು ಚರ್ಚಿಸಲಿದ್ದಾರೆ.
ಮೋದಿ ಅವರು ಯುಎಇ ಉಪಾಧ್ಯಕ್ಷ, ಪ್ರಧಾನ ಮಂತ್ರಿ ಮತ್ತು ರಕ್ಷಣಾ ಸಚಿವ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರನ್ನು ಖುದ್ದಾಗಿ ಭೇಟಿಯಾಗಿ, ಹಲವು ವಿಷಯಗಳನ್ನು ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ. ಅಧ್ಯಕ್ಷರ ಆಹ್ವಾನದ ಮೇರೆಗೆ, ಮೋದಿ ಅವರು ಗೌರವ ಅತಿಥಿಯಾಗಿ ದುಬೈನಲ್ಲಿ ನಡೆಯಲಿರುವ ವಿಶ್ವ ಸರ್ಕಾರಿ ಶೃಂಗಸಭೆ 2024ರಲ್ಲಿ ಭಾಗವಹಿಸಿ, ವಿಶೇಷ ಭಾಷಣ ಮಾಡಲಿದ್ದಾರೆ.
ಇದನ್ನೂ ಓದಿ:ಸ್ಯಾಂಡಲ್​ವುಡ್​ನ ಈ ಇಬ್ಬರು ಸ್ಟಾರ್​ಗಳ ಜತೆ ನಟಿಸುವ ಆಸೆಯಿದೆ; ನಟಿ ಪ್ರಿಯಾಂಕಾ ಹೆಸರಿಸಿದ ನಟರು ಇವರೇ
ಅಬುಧಾಬಿಯ ಜಾಯೆದ್ ಸ್ಪೋರ್ಟ್ಸ್ ಸಿಟಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಯುಎಇಯಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ,(ಏಜೆನ್ಸೀಸ್).
‘ಓಂ’ ಚಿತ್ರದಲ್ಲಿರುವ ಈ ಇಬ್ಬರು ಮಕ್ಕಳು ಈಗ ಹೇಗಿದ್ದಾರೆ ಗೊತ್ತಾ? ಸ್ಟಾರ್​ ನಟನ ಮಕ್ಕಳಿವರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 − nine =
Remember me
