ನವದೆಹಲಿ:ಮೂರನೇ ಹಂತದ ಲಾಕ್​ಡೌನ್​ ಅವಧಿ ಮುಗಿಯಲು ಇನ್ನೂ ಒಂದು ವಾರ ಬಾಕಿ ಇರುವಾಗಲೇ ಪ್ರಧಾನಿ ಮೋದಿಯವರು ಮತ್ತೊಮ್ಮೆ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.
ಮೇ 11ರ (ನಾಳೆ) ಮಧ್ಯಾಹ್ನ 3ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ:ಬೆಂಕಿಯಿಂದ ಬಾಣಲೆಗೆ: ಕೂಲಿಗೆ ಹೋಗುವಂತಿಲ್ಲ, ಬೆಂಗಳೂರು ಬಿಟ್ಟರೂ ಬವಣೆ ತಪ್ಪಿಲ್ಲ
ದೇಶದಲ್ಲಿ ಕರೊನಾ ನಿಯಂತ್ರಣಕ್ಕಾಗಿ ಮಾರ್ಚ್​ 25ರಿಂದ ಲಾಕ್​ಡೌನ್ ಜಾರಿ ಮಾಡಲಾಗಿದೆ. ಮೊದಲು ಮಾರ್ಚ್​ 25ರಿಂದ ಏಪ್ರಿಲ್​ 14ರವರೆಗೆ ಲಾಕ್​ಡೌನ್​ ಅವಧಿ ಇತ್ತು. ಅದು ನಂತರ ಮೇ 4ರವರೆಗೆ ವಿಸ್ತರಣೆಯಾಯಿತು. ಆದರೂ ಕರೊನಾ ನಿಯಂತ್ರಣವಾಗಿಲ್ಲದ ಕಾರಣ ಮೇ 17ರವರೆಗೆ ಲಾಕ್​ಡೌನ್ ಮುಂದುವರಿದಿದೆ.
ಹೀಗೆ ಪ್ರತಿಬಾರಿಯೂ ಲಾಕ್​ಡೌನ್​ ಅವಧಿ ಮುಕ್ತಾಯವಾಗುವಾಗ ಪ್ರಧಾನಿ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸುತ್ತಿದ್ದಾರೆ. ಆಯಾ ರಾಜ್ಯಗಳಲ್ಲಿನ ಕೊವಿಡ್​-19 ಪರಿಸ್ಥಿತಿ, ಆರ್ಥಿಕ ಸ್ಥಿತಿಗತಿಗಳ ವರದಿ ಕೇಳುತ್ತಿದ್ದಾರೆ. ಲಾಕ್​ಡೌನ್ ಶುರುವಾದಾಗಿನಿಂದಲೂ ಇದು ಐದನೇ ಬಾರಿಗೆ ಮೋದಿಯವರು ಎಲ್ಲ ರಾಜ್ಯಗಳ ಸಿಎಂಗಳ ಜತೆ ಸಭೆ ನಡೆಸುತ್ತಿರುವುದು.
ಇದನ್ನೂ ಓದಿ:ರಜೆ ಪಡೆಯದೆ ಸೇವೆ ಸಲ್ಲಿಸುತ್ತಿರುವ ಗರ್ಭಿಣಿ ನರ್ಸ್​ಗೆ ಕರೆ ಮಾಡಿ ಅಭಿನಂದಿಸಿದ ಸಿಎಂ
ದೇಶವನ್ನು ಕೊವಿಡ್​ ಹಸಿರು, ಕಿತ್ತಳೆ, ಕೆಂಪು ವಲಯಗಳನ್ನಾಗಿ ವಿಂಗಡಿಸಲಾಗಿದೆ. ಲಾಕ್​ಡೌನ್​ನ ಮೂರನೇ ಅವಧಿಯಲ್ಲಿ ಗ್ರೀನ್​ ಜೋನ್​​ನಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಒಂದೇ ಸಲ ದೇಶದಲ್ಲಿ ಲಾಕ್​ಡೌನ್​ ತೆಗೆಯಲು ಸಾಧ್ಯವಿಲ್ಲ. ಹಂತಹಂತವಾಗಿ ಈ ಪ್ರಕ್ರಿಯೆ ನಡೆಯುತ್ತದೆ ಎಂದು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.
ಕಳೆದ ಒಂದು ವಾರದಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಗಳ ಸಭೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. (ಏಜೆನ್ಸೀಸ್​)
ಭಾರತ-ಚೀನಾ ಗಡಿಯಲ್ಲಿ ಸೈನಿಕರ ಹೊಡೆದಾಟ…ಕಲ್ಲು ತೂರಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 7 =
Remember me
