ನವದೆಹಲಿ:ಈ ಬಾರಿ ಫ್ರಾನ್ಸ್​ ರಾಜಧಾನಿ ಪ್ಯಾರಿಸ್​ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್​ ಪದಕದಾಟದಲ್ಲಿ ಹರಿಯಾಣದ ಮೂಲದ 22 ವರ್ಷದ ಶೂಟರ್​​ ಮನು ಭಾಕರ್​ ಅವರು ರೈಫಲ್ ಶೂಟಿಂಗ್​ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಬೀಗಿದ್ದಾರೆ. ಈ ಮೂಲಕ​ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕಗಳ ಖಾತೆಯನ್ನು ತೆರೆದಿದೆ. ಮಹಿಳೆಯರ 10 ಮೀಟರ್​ ಶೂಟಿಂಗ್​ ವಿಭಾಗದಲ್ಲಿ ಕಂಚಿನ ಪದಕಕ್ಕೆ ಮುತ್ತಿಡುವ ಮೂಲಕ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ.
ಇದನ್ನೂ ಓದಿ:ದೇಶಭಕ್ತರ ಸೆಳೆದ ಕಾರ್ಗಿಲ್ ವಿಜಯ ದಿವಸ, ವಿಜಯವಾಣಿ ಆಯೋಜಿಸಿದ್ದ ಕಾರ್ಯಕ್ರಮ
ಶನಿವಾರ (ಜು.27) ನಡೆದ ಅರ್ಹತಾ ಸುತ್ತಿನಲ್ಲಿ ಮನು ಭಾಕರ್​ 27 ಇನ್ನರ್​ ಸರ್ಕಲ್​ 10s ಒಳಗೊಂಡಂತೆ 580 ಅಂಕಗಳೊಂದಿಗೆ 3ನೇ ಸ್ಥಾನವನ್ನು ಪಡೆದು ಫೈನಲ್​ ಸುತ್ತಿಗೆ ಎಂಟ್ರಿ ಕೊಟ್ಟಿದ್ದರು. ಇಂದು ಮಧ್ಯಾಹ್ನ 3.30ಕ್ಕೆ ಚಟೌರೊಕ್ಸ್ ಶೂಟಿಂಗ್ ಸೆಂಟರ್​ನಲ್ಲಿ ನಡೆದ ಅಂತಿಮ ಸುತ್ತಿನಲ್ಲಿ 3ನೇ ಸ್ಥಾನದೊಂದಿಗೆ ಕಂಚಿನ ಪದಕವನ್ನು ಗೆದ್ದು, ಇತಿಹಾಸ ಬರೆದಿದ್ದಾರೆ. ಪ್ರಸಕ್ತ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಮನು ಭಾಕರ್​ ಭಾಜನರಾಗಿದ್ದಾರೆ.
ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮನು ಭಾಕರ್​ಗೆ ದೇಶವ್ಯಾಪಿ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಅಭಿನಂದನೆ ತಿಳಿಸಿದ್ದಾರೆ. ಇದು ಐತಿಹಾಸಿಕ ಮೆಡಲ್. 2024ರ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದ ಮಹಿಳೆ ನೀವಾಗಿದ್ದೀರಿ. ನಿಮಗೆ ಅಭಿನಂದನೆಗಳು. ಎಂತಹ ಅತ್ಯುತ್ತಮ ಸಾಧನೆ ಎಂದು ಅಭಿನಂದನೆ ಜತೆ ಶ್ಲಾಘನೆ ಕೂಡ ವ್ಯಕ್ತಪಡಿಸಿದ್ದಾರೆ.
ಈ ವಿಷಯದಲ್ಲಿ ಬ್ಯಾಟರ್ಸ್​​ಗಿಂತ ಬೌಲರ್ಸ್​​ ಬೆಸ್ಟ್​! ವಾಸೀಮ್ ಅಕ್ರಮ್, ಯೂನಿಸ್​ ಹೋಲಿಕೆ ಮಾಡಿದ ಬುಮ್ರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 11 =
Remember me
