ಮುಂಬೈ:ಲೌಡ್​ ಸ್ಪೀಕರ್​ ವಿವಾದದ ಹಿನ್ನೆಲೆಯಲ್ಲಿ ಹುಟ್ಟಿಕೊಂಡಿರುವ ಹನುಮಾನ್​ ಚಾಲೀಸ ವಿವಾದಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಸಂಸದೆಯೊಬ್ಬರು ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾರೆ.
ಮಹಾರಾಷ್ಟ್ರ ಸಂಸದೆ ನವ್​ನೀತ್ ರಾಣಾ ಹಾಗೂ ಆಕೆಯ ಪತಿ, ಶಾಸಕರೂ ಆಗಿರುವ ರವಿ ರಾಣಾ ಬಂಧಿತ ಆರೋಪಿಗಳು. ಇವರನ್ನು ಮುಂಬೈನ ಖಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಸಂಸದೆ ಹಾಗೂ ಶಾಸಕರನ್ನು ಪೊಲೀಸರು ನಾಳೆ ನ್ಯಾಯಾಲಯಕ್ಕೆ ಒಪ್ಪಿಸಲಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನಿವಾಸ ಮಾತೋಶ್ರೀ ಎದುರು ಹನುಮಾನ್ ಚಾಲೀಸ ಪಠಿಸುವುದಾಗಿ ಶಾಸಕ ರವಿ ರಾಣಾ ಹಾಗೂ ಸಂಸದೆ ನವ್​ನೀತ್ ರಾಣಾ ದಂಪತಿ ಬೆದರಿಕೆ ಒಡ್ಡಿದ್ದರು. ಈ ಹಿನ್ನೆಲೆಯಲ್ಲಿ ಶಿವಸೇನೆಯ ಕಾರ್ಯಕರ್ತರು ನಗರದ ಹಲವೆಡೆ ಜಮಾಯಿಸಿದ್ದಲ್ಲದೆ, ಮಾತೋಶ್ರೀ ಮುಂದೆಯೂ ಸೇರಿದ್ದರು. ಅಲ್ಲದೆ ಶಿವಸೇನೆ ಕಾರ್ಯಕರ್ತರ ದೂರಿನ ಮೇರೆಗೆ ಪೊಲೀಸರು ಇವರನ್ನು ಬಂಧಿಸಿದ್ದಾರೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + one =
Remember me
