ಉತ್ತರಪ್ರದೇಶ:ಪಕ್ಕದಮನೆಯ ಹುಡುಗಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯನ್ನು ಟೆರೇಸ್​ ಮೇಲಿಂದ ತಳ್ಳಿದ್ದು, ಯುವತಿಯ ಪರಿಸ್ಥಿತಿ ಗಂಭೀರವಾಗಿದೆ. ಮತ್ತೊಂದೆಡೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೆಳಕ್ಕೆ ತಳ್ಳಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರಪ್ರದೇಶದ ಘಾಜಿಪುರ್​ನ ವಾಲಿದ್​ಪುರ್ ಎಂಬಲ್ಲಿ ಶುಕ್ರವಾರ ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಕೆಯ ನೆರೆಮನೆಯ ಹುಡುಗರೇ ಈ ಕೃತ್ಯ ಎಸಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಯುವತಿ ಅವರ ಹೆಸರುಗಳನ್ನು ಪೊಲೀಸರಿಗೆ ಹೇಳಿದ್ದಾಳೆ.
ಆರೋಪಿಗಳು ಆಕೆಯ ಮೇಲೆ ಪದೇಪದೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಆಕೆ ವಿರೋಧಿಸಿದ್ದರಿಂದ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಅವಳನ್ನು ಅಜಮ್​ಘರ್​ ಆಸ್ಪತ್ರೆಗೆ ದಾಖಲಿಸಲಾಗಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 19 =
Remember me
