ಹೈದರಬಾದ್​:ಕರ್ತವ್ಯನಿರತ ಇಬ್ಬರು ಪೊಲೀಸ್​ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಇಬ್ಬರು ಸಹ ಗಸ್ತು ವಾಹನದ ಸಿಬ್ಬಂದಿ ಎಂದು ತಿಳಿದುಬಂದಿದೆ. ವಾಹನವನ್ನು ಪಕ್ಕದಲ್ಲಿ ಪಾರ್ಕ್​ ಮಾಡಿ ಮನೆಯ ಮುಂದಿನ ಸಣ್ಣದಾಗ ಗೋಡೆಯ ಮೇಲೆ ಕುಳಿತು ಇಬ್ಬರು ಮದ್ಯ ಸೇವನೆ ಮಾಡಿದ್ದಾರೆ. ಇಬ್ಬರು ಕೂಡ ಹೈದರಾಬಾದ್​ನ ಪಂಜಗುಟ್ಟ ಠಾಣಾ ಪೊಲೀಸರು ಎಂದು ಹೇಳಲಾಗಿದೆ. ಪಂಜಗುಟ್ಟ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ಕೆಲಸದ ನಡುವೆ ವಾಹನವನ್ನು ರಸ್ತೆ ಪಕ್ಕದಲ್ಲೇ ನಿಲ್ಲಿಸಿ, ನಿಯಮಗಳನ್ನು ಗಾಳಿಗೆ ತೂರಿ ಸಮವಸ್ತ್ರದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ.
ಪಾರ್ಟಿ ಮಾಡಿದ ಸ್ಥಳದಲ್ಲಿ ವಾಕಿಟಾಕಿ ಸಹ ಇದೆ. ನಾನ್​ವೆಜ್​ ಊಟದೊಂದಿಗೆ ಭರ್ಜರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ದೃಶ್ಯ ಸ್ಥಳೀಯರೊಬ್ಬರ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ನಿಯಮಗಳನ್ನು ಪಾಲಿಸದಿರುವವರ ಮೇಲೆ ಹದ್ದಿನ ಕಣ್ಣಿಡಬೇಕಾದ ಪೊಲೀಸರೇ ನಿಯಮಗಳನ್ನು ಗಾಳಿಗೆ ತೂರಿದ್ದು, ಬೇಲಿಯೇ ಎದ್ದು ಹೊಲ ಮೇಯ್ದದಂತಿದೆ.
ಈ ಘಟನೆ ಹೈದರಾಬಾದ್​ನ ಎರ್ರಾಮಂಜಿಲ್​ ಗ್ಯಾಲ್ಲೆರಿಯಾ ಮಾಲ್​ ಬಳಿ ನಡೆದಿದೆ. ವಿಡಿಯೋ ವೈರಲ್​ ಆಗಿದ್ದು, ಹಿರಿಯ ಅಧಿಕಾರಿಗಳ ಗಮನಕ್ಕೆ ಇದು ಬಂದಿದ್ದು, ಇಬ್ಬರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನೆಟ್ಟಿಗರು ಸಹ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪೊಲೀಸರ ಇಂಥಹ ವರ್ತನೆ, ಅವರ ಮೇಲಿನ ನಂಬಿಕೆ ಹುಸಿಯನ್ನಾಗಿಸುತ್ತದೆ ಎಂಬುದನ್ನು ಮರೆಯಬಾರದು.(ಏಜೆನ್ಸೀಸ್​)
ರಾಜ್ಯದ ರೈಲು ಯೋಜನೆಗೆ ದಾಖಲೆ ಅನುದಾನ ಹಂಚಿಕೆ

ಆದಿಲ್​ಗೆ ಅಕ್ರಮ ಸಂಬಂಧವಿದೆ: ಮದ್ವೆಯಾದ ಕೆಲವೇ ದಿನಗಳಲ್ಲಿ ಪತಿ ವಿರುದ್ಧ ರಾಖಿ ಸಾವಂತ್​ ಗಂಭೀರ ಆರೋಪ

ಸ್ಪೀಕರ್ ಕಾಗೇರಿಗೆ ಈ ಬಾರಿ ಟಿಕೆಟ್ ಕೈತಪ್ಪುವ ಭಯ: ಬಿಜೆಪಿ ಪಾಳಯದಲ್ಲಿ ಹಲವು ಕಲಿಗಳು; ಕಾಂಗ್ರೆಸ್​ನಲ್ಲಿ ಸಮರ್ಥ ಅಭ್ಯರ್ಥಿ ಯಾರೆಂಬ ಚರ್ಚೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 10 =
Remember me
