ಗುರುಗ್ರಾಮ:ಮಧ್ಯೆ ಮಾತನಾಡಿ ಅಡ್ಡಿಪಡಿಸಬೇಡ ಎಂದಿದ್ದಕ್ಕೆ ಪೊಲೀಸ್​ ಕಾನ್​ಸ್ಟೆಬಲ್​​ ಓರ್ವ ತನಗಿಂತ ಹಿರಿಯ ಅಧಿಕಾರಿಯಾಗಿರುವ ಮಹಿಳಾ ಪೊಲೀಸ್​ ಸಬ್​​ ಇನ್ಸ್​ಪೆಕ್ಟರ್​ ಮೇಲೆ ಹಲ್ಲೆ ಮಾಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿರುವುದಾಗಿ ಪೊಲೀಸ್​ ಮೂಲಗಳು ಶುಕ್ರವಾರ ತಿಳಿಸಿವೆ.
ಗುರುಗ್ರಾಮದ ಸೆಕ್ಟರ್​ 37 ಪೊಲೀಸ್​ ಠಾಣೆಯ ಎಎಸ್​ಐ ಪೂನಂ ಮತ್ತು ಕಾನ್​ಸ್ಟೆಬಲ್​ ಪ್ರವೇಶ್​ ನಡುವೆ ಬುಧವಾರ ರಾತ್ರಿ ಗಲಾಟೆ ನಡೆದಿದೆ. ಅತ್ಯಾಚಾರ ಪ್ರಕರಣದ ದೂರುದಾರರ ಜತೆ ಮಾತನಾಡುವಾಗ ಮಧ್ಯ ಮಾತನಾಡಬೇಡ ಎಂದಿದ್ದಕ್ಕೆ ಎಎಸ್​ಐ ಮೇಲೆ ಕಾನ್​ಸ್ಟೇಬಲ್​ ಹಲ್ಲೆ ಮಾಡಿದ್ದಾರೆ.
ಇದನ್ನೂ ಓದಿ:ಪಿಎಫ್ಐ, ಎಸ್ ಡಿಪಿಐ ಜತೆ ಕಾಂಗ್ರೆಸ್ ಆಂತರಿಕ ಒಪ್ಪಂದವೇನು?: ಬಿಜೆಪಿ ರಾಷ್ಟ್ರೀಯ ವಕ್ತಾರ
ಕೊಲೆ ಬೆದರಿಕೆಇಬ್ಬರ ನಡುವಿನ ಜಗಳ ಉಲ್ಬಣಗೊಂಡು, ಕಾನ್‌ಸ್ಟೆಬಲ್ ಪ್ರವೇಶ್​, ಎಎಸ್‌ಐಗೆ ಪೂನಂಗೆ ಕೊಲೆ ಬೆದರಿಕೆ ಸಹ ಹಾಕಿದರು. ಆದರೆ ಸ್ಥಳದಲ್ಲಿದ್ದ ಇತರ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಜಗಳವನ್ನು ತಡೆದರು. ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ತಿಳಿದಾಗ, ಎಸಿಪಿ ಶ್ರೇಣಿಯ ಅಧಿಕಾರಿ ಪೊಲೀಸ್ ಠಾಣೆಗೆ ಆಗಮಿಸಿ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದರು.
ಎಸ್​ಎಚ್​ಒ ವರ್ಗಾವಣೆಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಸೆಕ್ಟರ್ 37 ಪೊಲೀಸ್ ಠಾಣೆಯ ಎಸ್‌ಎಚ್‌ಒ ಆಗಿದ್ದ ಇನ್‌ಸ್ಪೆಕ್ಟರ್ ಸುನೀತಾ ಅವರನ್ನು ಪೊಲೀಸ್ ಲೈನ್‌ಗೆ ವರ್ಗಾಯಿಸಲಾಗಿದೆ ಮತ್ತು ಇನ್‌ಸ್ಪೆಕ್ಟರ್ ಅಮನ್ ಬೇನಿವಾಲ್ ಅವರನ್ನು ಎಸ್‌ಎಚ್‌ಒ ಆಗಿ ನೇಮಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:500 ದಿನ ಒಬ್ಬರೇ ಗುಹೆ ಒಳಗೆ ಇದ್ದ ಪರ್ವತಾರೋಹಿ! ಹೊರಗೆ ಬರುತ್ತಲೇ ಹೇಳಿದ್ದೇನು?
ದೂರು ದಾಖಲುಗುರುವಾರ ಕಾನ್​ಸ್ಟೆಬಲ್​ ಪ್ರವೇಶ್ ವಿರುದ್ಧ ಎಎಸ್‌ಐ ಪೂನಂ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಸೆಕ್ಟರ್ 10 ಎ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಗಾಯ ಉಂಟುಮಾಡುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಹೆಚ್ಚಿನ ತನಿಖೆ ನಡೆಯುತ್ತಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.(ಏಜೆನ್ಸೀಸ್​)
ಸೂಕ್ತ ಸಮಯಕ್ಕೆ ಆಗಮಿಸಿ ಮಹಿಳೆಯ ಪ್ರಾಣ ಉಳಿಸಿದ ಪೊಲೀಸರ ಕಾರ್ಯವೈಖರಿಗೆ ಮೆಚ್ಚುಗೆ

ಡಿಎಂಕೆ ಪ್ರಶ್ನೆಗೆ 4.5 ಲಕ್ಷ ರೂ. ಮೌಲ್ಯದ ಕೈಗಡಿಯಾರದ ಬಿಲ್ ಬಿಡುಗಡೆ ಮಾಡಿದ ಅಣ್ಣಾಮಲೈ; ಎದ್ದವು ಇನ್ನಷ್ಟು ಪ್ರಶ್ನೆಗಳು!

ಶಿಗ್ಗಾಂವಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + six =
Remember me
