ನವದೆಹಲಿ:ಪಂಜಾಬಿನ ಫಿರೋಜ್ ಪುರ ಕಂಟೋನ್ಮೆಂಟ್ ಪ್ರದೇಶದ ಪೊಲೀಸ್ ಠಾಣೆಯಲ್ಲಿ ನಿಯೋಜಿತ ಪೊಲೀಸ್ ಕಾನ್ಸ್ಟೇಬಲ್, ತನ್ನ ಮಹಿಳಾ ಸಹೋದ್ಯೋಗಿಯನ್ನು ಗುಂಡಿಕ್ಕಿ ಕೊಂದು ನಂತರ ಶನಿವಾರ ರಾತ್ರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಹಿಳಾ ಕಾನ್ಸ್ಟೇಬಲ್ ಅಮನ್ ದೀಪ್ ಕೌರ್ ಮತ್ತು ಆರೋಪಿ ಮೃತ ಕಾನ್ಸ್ಟೇಬಲ್ಅನ್ನು ಗುರುಸೇವಕ್ ಸಿಂಗ್ ಎಂದು ಪೊಲೀಸರು ಗುರುತಿಸಿದ್ದಾರೆ.
ಅಮನ್ ದೀಪ್ ಕೌರ್, ದ್ವಿಚಕ್ರ ವಾಹನದಲ್ಲಿ ತಮ್ಮ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ಫಿರೋಜ್ ಪುರದ ಶೇರ್ ಶಾ ವಾಲಿ ವೃತ್ತದಲ್ಲಿ, ಗುರ್ ಸೇವಕ್, ತನ್ನ ಕಾರಿನ ಮುಂಭಾಗದಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ನಂತರ ಆಕೆಯ ಮೇಲೆ ಐದು ಬಾರಿ ಗುಂಡು ಹಾರಿಸಿದ್ದಾನೆ. ಅದಾದ ಮೇಲೆ ಆತ ಸ್ಥಳದಿಂದ ಓಡಿಹೋಗಿದ್ದು ಶೇರ್ ಶಾ ವಾಲಿ ಚೌಕ್್ನಿಂದ ಸುಮಾರು 20 ನಿಮಿಷಗಳ ದೂರದಲ್ಲಿರುವ ತಲ್ವಾಂಡಿ ಚೌಕ್ ತಲುಪಿದ. ನಂತರ ಆತ ತನ್ನ ಕಾರಿನೊಳಗೆ ಕುಳಿತುಕೊಂಡು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಗೆ ಕಳುಹಿಸಿದ್ದು ಕೊಲೆ ಮತ್ತು ಆತ್ಮಹತ್ಯೆಗೆ ಕಾರಣವನ್ನು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − one =
Remember me
