ಹೈದರಾಬಾದ್​:ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿ ಇಂದು ಹೈದರಾಬಾದ್​ನಲ್ಲಿ ಹೋರಾಟ ನಡೆಸಲಾಗುತ್ತಿದೆ. ಸಿಪಿಐ ನಡೆಸುತ್ತಿರುವ ಹೋರಾಟದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಪ್ರತಿಕೃತಿ ದಹನ ಮಾಡುವ ಪ್ರಯತ್ನ ನಡೆಸಲಾಗಿದೆ. ಈ ವೇಳೆ ಪೊಲೀಸರು ಕೆಲ ಸಿಪಿಐ ಸದಸ್ಯರನ್ನು ವಶಕ್ಕೆ ಪಡೆದಿದ್ದಾರೆ.
ದೆಹಲಿಯಲ್ಲಿ ಸಿಎಎ ಮತ್ತು ಎನ್​ಆರ್​ಸಿ ಪರ ವಿರೋಧ ಹೋರಾಟ ಹಿಂಸಾತ್ಮಕ ಹಾದಿ ತುಳಿದಿದೆ. ಇದರಿಂದಾಗಿ ಮುಖ್ಯ ಪೇದೆ, ಗುಪ್ತಚರ ದಳದ ಅಧಿಕಾರಿ ಸೇರಿದಂತೆ ಒಟ್ಟು 34 ಜನರು ಮೃತರಾಗಿದ್ದಾರೆ. 200ಕ್ಕೂ ಹೆಚ್ಚು ಜನರು ಗಾಯಾಳುಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪರಿಸ್ಥಿತಿಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಅನೇಕ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ದೂಷಿಸಿವೆ. ನಿನ್ನೆ ಸಭೆ ನಡೆಸಿದ ಕಾಂಗ್ರೆಸ್​ ಮುಖಂಡರು, ಅಮಿತ್​ ಷಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು. ಅಮಿತ್​ ಷಾ ಅವರ ರಾಜೀನಾಮೆಗೆ ಕಾಂಗ್ರೆಸ್​ ಒತ್ತಾಯಿಸಿರುವ ಬೆನ್ನಲ್ಲೇ ಅನೇಕ ಕಡೆಗಳಲ್ಲಿ ಹೋರಾಟದ ಕಿಚ್ಚು ಹತ್ತಿದ್ದು ಗೃಹ ಸಚಿವರ ರಾಜೀನಾಮೆಗೆ ಒತ್ತಾಯ ಮಾಡಲಾಗುತ್ತಿದೆ.
ಇಂದು ಬೆಳಗ್ಗೆಯಿಂದ ಹೈದರಾಬಾದ್​ನಲ್ಲಿ ಅಮಿತ್​ ಷಾ ಅವರ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ನಡೆಸಲಾಗುತ್ತಿದ್ದು, ಅವರ ಪ್ರತಿಕೃತಿಗೆ ಬೆಂಕಿ ಹಚ್ಚುವ ಪ್ರಯತ್ನ ಮಾಡಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪೊಲೀಸರು ಸಿಪಿಐನ ಕೆಲವು ಸದಸ್ಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.(ಏಜೆನ್ಸೀಸ್​)
#WATCHTelangana: Police detains CPI (Communist Party of India) members after they attempt to burn effigy of Union Home Minister Amit Shah in Hyderabad, demanding his resignation over#DelhiViolence.pic.twitter.com/DK1C0dxyZ3
— ANI (@ANI)February 27, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 2 =
Remember me
