ಭೋಜ್‌ಪುರ:ಪೊಲೀಸ್ ಠಾಣೆಯ ಚಾಲಕ ಮಹಿಳಾ ಕಾನ್​ಸ್ಟೇಬಲ್ ಒಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಕೊಯಿಲ್ವಾರ್ ಎಂಬಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ವರದಿ ಕೇಳಿದ್ದಾರೆ ಎನ್ನಲಾಗಿದೆ.
ಕೊಯಿಲ್ವಾರ್ ಪೊಲೀಸ್ ಠಾಣೆಯ ಚಾಲಕ ಅತೀಶ್ ಕುಮಾರ್ ಎಂಬಾತ, ಇತರೆ ಪೊಲೀಸರ ಎದುರಲ್ಲೇ ಮಹಿಳಾ ಕಾನ್​ಸ್ಟೇಬಲ್ ಮೇಲೆ ಹಲ್ಲೆ ಮಾಡಿದ್ದಾನೆ. ಘಟನೆಯಿಂದ ಸ್ಥಳದಲ್ಲಿ ಕೆಲ ಹೊತ್ತು ಗೊಂದಲದ ವಾತಾವರಣ ಉಂಟಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:VIDEO | ಬಾಲಕನನ್ನು ತಿಂದ ಮೊಸಳೆಯ ಜೀವ ತೆಗೆದ ಜನರು!
ಶಮೀಮ್ ಅಹಮದ್ ಎಂಬಾತ ತನ್ನ ಮನೆ ಮುಂದೆ ಅನಧಿಕೃತವಾಗಿ ಮನೆ ಕಟ್ಟಿದ್ದಾನೆ ಎಂದು ಆರೋಪಿಸಿ ಮೆರಾಜ್ ಎಂಬಾತ ಠಾಣೆ ಮೆಟ್ಟಿಲೇರಿದ್ದ. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಿಶೀಲನೆಗೆ ತೆರಳಿದ್ದ ಸಂದರ್ಭದಲ್ಲಿ ಅಲ್ಲಿದ್ದ ಜನರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ:
ಈ ವೇಳೆ ಪೊಲೀಸ್ ವಾಹನದ ಚಾಲಕ ಅಲ್ಲಿದ್ದ ಜನರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ. ಇದನ್ನು ಸ್ಥಳೀಯರು ವಿಡಿಯೋ ಮಾಡಲು ಆರಂಭಿಸಿದಾಗ ಮೊಬೈಲ್ ಕಿತ್ತುಕೊಂಡಿದ್ದಾನೆ. ಇದೇ ವೇಳೆ ಮಹಿಳಾ ಕಾನ್​ಸ್ಟೇಬಲ್ ಚಾಲಕನಲ್ಲಿ ಸುಮ್ಮನಿರುವಂತೆ ಕೇಳಿಕೊಳ್ಳಲು ಯತ್ನಿಸಿದಾಗ, ಎಲ್ಲರ ಮುಂದೆಯೇ ಕೆನ್ನೆಗೆ ಬಾರಿಸಿದ್ದಾನೆ. ಕೂಡಲೇ ಅಲ್ಲಿದ್ದ ಇತರೆ ಪೊಲೀಸರು ಚಾಲಕನನ್ನು ತಡೆದಿದ್ದಾರೆ ಎಂದು ವರದಿಯಾಗಿದೆ.
ಕೊಯಿಲ್ವಾರ್ ಠಾಣೆ ಅಧಿಕಾರಿ ಅವಿನಾಶ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದೂರು ಸ್ವೀಕರಿಸಿದ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಜನರೊಂದಿಗೆ ಮಾತಿನ ಚಕಮಕಿ ನಡೆದಿದೆ. ಚಾಲಕನನ್ನು ಹಿಂದಿನಿಂದ ತಡೆಯುತ್ತಿರುವುದು ಮಹಿಳಾ ಕಾನ್‌ಸ್ಟೆಬಲ್ ಎಂಬುದು ಗೊತ್ತಾಗದೆ ಹಲ್ಲೆ ನಡೆದಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 4 =
Remember me
