ಚೆನ್ನೈ:ನಗರದ ತ್ಯಾಗರಾಯ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸರ್ಕಾರಿ ಬಸ್‌ ಮೇಲೆ ನಿಂತು ಅಜಾಗರೂಕತೆಯಿಂದ ವರ್ತಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಇದನ್ನೂ ಓದಿ:ಪಾಕ್​ಗೆ ತೆರಳಿದ ಭಾರತದ ಅಂಜು ಇನ್ಮುಂದೆ ಫಾತಿಮಾ: ಮತಾಂತರಗೊಂಡು ನಸ್ರುಲ್ಲಾನನ್ನು ಮದ್ವೆಯಾದ ವಿವಾಹಿತೆ!
ವಿದ್ಯಾರ್ಥಿಗಳು ಎನ್ನೂರು ಮತ್ತು ವಲ್ಲಲಾರ್ ನಗರ ನಡುವೆ ಸಂಚರಿಸುವ ಸರ್ಕಾರಿ ಬಸ್ ಮೇಲೆ ಹತ್ತಿ ಸೆಲ್ಫಿ ತೆಗೆದುಕೊಳ್ಳುವ ಮುಖೇನ ಪುಂಡಾಟ ಮೆರೆದಿದ್ದಾರೆ. ಈ ರೀತಿಯ ಅಪಾಯಕಾರಿ ಚಟುವಟಿಕೆಗಳಲ್ಲಿ ತೊಡಗಿರುವ ದೃಶ್ಯ ಸ್ಥಳೀಯರ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆಯ ವೀಡಿಯೋ ಶೀಘ್ರವೇ ಪೊಲೀಸ್​​ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಕೂಡಲೇ ನಾಲ್ವರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಪುಂಡಾಟವನ್ನು ಪ್ರಶ್ನಿಸಿದ ನಗರ ಪೊಲೀಸರು, ವಿದ್ಯಾರ್ಥಿಗಳಿಗೆ ಬುದ್ಧಿ ಮಾತನ್ನು ಹೇಳಿ, ಭವಿಷ್ಯದಲ್ಲಿ ಇಂತಹ ಅಪಾಯಕಾರಿ ವರ್ತನೆಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ ಎಂದು ಲಿಖಿತ ರೂಪದಲ್ಲಿ ಕೊಡಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮಲಗಿದ್ದ ಮಗುವಿನ ಬಾಯಿಯೊಳಗೆ ಹೋದ ಹಲ್ಲಿ: ಹೋಗಿದ್ದು ಎರಡು ಪ್ರಾಣ, ಏನಿದು ವಿಚಿತ್ರ ಘಟನೆ..
ಇಲ್ಲಿಗೆ ಬಿಟ್ಟು ಕಳುಹಿಸದ ಪೊಲೀಸ್ ಅಧಿಕಾರಿಗಳು, ನಾಲ್ವರನ್ನು ಘಟನೆಯ ಸ್ಥಳಕ್ಕೆ ಕರೆದುಕೊಂಡು ಹೋಗಿ, ಟ್ರಾಫಿಕ್​ ನಿಯಂತ್ರಣ ಮಾಡುವುದು ಹೇಗೆ ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಿ, ನಂತರ ಅದೇ ರೀತಿ ಮಾಡುವಂತೆ ತಿಳಿಸಿದ್ದಾರೆ. ಈ ರೀತಿ ವಿದ್ಯಾರ್ಥಿಗಳಿಗೆ ಶಿಕ್ಷೆ ವಿಧಿಸಿದ ಪೊಲೀಸರಿಗೆ ಸಾರ್ವಜನಿಕರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ,(ಏಜೆನ್ಸೀಸ್).
ಮಳೆಗಾಲದಲ್ಲಿ ಪಾದಗಳಲ್ಲಿ ಸೋಂಕು ಕಾಣಿಸಿಕೊಂಡರೆ ಈ ವಿಧಾನ ಅನುಸರಿಸಿ ನೋಡಿ…

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 × five =
Remember me
