ನವದೆಹಲಿ:ರಸ್ತೆಯಲ್ಲೇ ನಮಾಜ್​ ಮಾಡುತ್ತಿದ್ದರು ಎಂಬ ಕಾರಣಕ್ಕೆ ಪೊಲೀಸ್​ ಅಧಿಕಾರಿಯೊಬ್ಬರು ಮುಸ್ಲಿಂ ವ್ಯಕ್ತಿಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಇಂದರ್​ಲೋಕ್​ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಖಂಡನೆ ವ್ಯಕ್ತವಾಗುತ್ತಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಪೊಲೀಸ್​ ಅಧಿಕಾರಿಯೊಬ್ಬರು, ನಮಾಜ್​ ಮಾಡುತ್ತಿದ್ದ ವ್ಯಕ್ತಿಗಳಿಗೆ ಕಾಲಿನಿಂದ ಒದ್ದು ಪ್ರಾರ್ಥನೆಯ ಮಧ್ಯದಲ್ಲೇ ಮೇಲಕ್ಕೆ ಏಳುವಂತೆ ಸೂಚಿಸುತ್ತಾರೆ. ಈ ವೇಳೆ ಕೆಲವರು ಅಧಿಕಾರಿಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ವಾಗ್ವಾದ ನಡೆದಿದೆ. ಹಲವರು ಅಧಿಕಾರಿಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್​ ಆಗುತ್ತಿದ್ದಂತೆ ಎಚ್ಚೆತ್ತ ದೆಹಲಿ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದ್ದು, ವಿಚಾರಣೆ ಮುಗಿದ ಬಳಿಕ ಮತ್ತಷ್ಟು ಮಾಹಿತಿ ನೀಡಲಾಗುವುದು. ಈ ರೀತಿಯ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸುವ ಮಾತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight + nine =
Remember me
