ಚಂಡೀಗಢ:ಆಘಾತಕಾರಿ ಘಟನೆಯೊಂದರಲ್ಲಿ ತನ್ನ ಮನೆ ಕೆಲಸಕ್ಕಿದ್ದ ಅಪ್ರಾಪ್ತ ವಯಸ್ಕಳ ಮೇಲೆ ಪೊಲೀಸ್​ ಅಧಿಕಾರಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸ್​ ಅಧಿಕಾರಿಯನ್ನು ಅಮಾನತು ಮಾಡಲಾಗಿದ್ದು, ಸಂತ್ರಸ್ತೆಯನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಬಂಧಿತನನ್ನು ಅನೂಪ್​ ಸಿಂಗ್​ ಎಂದು ಗುರುತಿಸಲಾಗಿದ್ದು, ಈತ ಹರಿಯಾಣ ಪೊಲೀಸ್​ ಇಲಾಖೆಯಲ್ಲಿ ಎಸ್ಕಾರ್ಟ್​ ಗಾರ್ಡ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದಾನೆ. ಸಂತ್ರಸ್ತ ಬಾಲಕಿ ಆರೋಪಿ ಮನೆಯಲ್ಲಿ ಕೆಲಸಕ್ಕಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೃತ್ಯ ಎಸಗಿದ್ದಾನೆ.
ಬಾಲಕಿ ತನ್ನ ಮನೆಗೆ ಬಂದ ಬಳಿಕ ಪೋಷಕರ ಬಳಿ ನಡೆದ ಘಟನೆಯನ್ನು ವಿವರಿಸಿದ್ದು, ಸಂತ್ರಸ್ತೆಯ ಪೋಷಕರು ನೀಡಿದ ದೂರಿನನ್ವಯ ಆರೋಪಿಯನ್ನು ವಶಕ್ಕೆ ಪಡೆದು ಸೇವೆಯಿಂದ ಅಮಾನತು ಮಾಡಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಆರೋಪಿ ವಿರುದ್ಧ ಭಾರತ ದಂಡ ಸಂಹಿತೆ 164 ಹಾಗೂ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
