ಹೈದರಾಬಾದ್​:ತೆಲುಗಿನ ಖ್ಯಾತ ನಟ ನಾಗಶೌರ್ಯ ಫಾರ್ಮ್​ಹೌಸ್​ ಮೇಲೆ ದಾಳಿ ಮಾಡಿರುವ ಪೊಲೀಸರು 25 ಮಂದಿಯನ್ನು ಬಂಧಿಸಿದ್ದು, 25 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ. ನಿನ್ನೆ ಸಂಜೆಯೇ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಫಾರ್ಮ್​ಹೌಸ್​ನಲ್ಲಿನ 25 ಮಂದಿ ಮಾತ್ರವಲ್ಲದೆ, ಸಮಾಜದಲ್ಲಿ ಇತರ 20 ಗಣ್ಯರನ್ನೂ ವಶಕ್ಕೆ ಪಡೆದಿರುವ ಮಾಹಿತಿ ಇದೆ.
ಕಾರ್ಡ್​ ಸ್ವೈಪಿಂಗ್ ಮಷಿನ್ ಇಟ್ಟುಕೊಂಡು ಜೂಜಾಟ ನಡೆಯುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ 25 ಲಕ್ಷ ರೂಪಾಯಿ ನಗದು ಲಭಿಸಿದ್ದು, ಜೂಜಾಟದಲ್ಲಿ ಪಾಲ್ಗೊಂಡಿದ್ದ 25 ಮಂದಿಯನ್ನು ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ ಒಬ್ಬರ ಫೋನ್​ ಕೂಡ ವಶಕ್ಕೆ ಪಡೆಯಲಾಗಿದ್ದು, ಅದರಲ್ಲಿನ ಮಾಹಿತಿ ಆಧಾರದ ಮೇಲೆ ಮತ್ತಷ್ಟು ಕಾರ್ಯಾಚರಣೆ ನಡೆಯಲಿದೆ.
ಇದನ್ನೂ ಓದಿ:ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿದ ಪತ್ನಿ; ಬಳಿಕ ಮೊಬೈಲ್​ಫೋನ್​ ಸ್ವಿಚ್ಡ್​ ಆಫ್ ಮಾಡಿ ಪರಾರಿ
ಹೈದರಾಬಾದ್​ನ ಈ ಫಾರ್ಮ್​ಹೌಸ್​ ತೆಲುಗಿನ ಖ್ಯಾತನಟ ನಾಗಶೌರ್ಯ ಅವರಿಗೆ ಸೇರಿರುವುದು ತಿಳಿದುಬಂದಿದೆ. ಅಲ್ಲದೆ ನಾಗಶೌರ್ಯ ಅವರು ಇದನ್ನು ನಿವೃತ್ತ ಐಎಎಸ್​ ಅಧಿಕಾರಿಯೊಬ್ಬರಿಂದ ಆರು ತಿಂಗಳ ಲೀಸ್​ಗೆ ಪಡೆದಿರುವ ಮಾಹಿತಿಯೂ ಹೊರಬಿದ್ದಿದ್ದು, ಪೊಲೀಸರು ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ನಾಗಶೌರ್ಯ ಪ್ರತಿಕ್ರಿಯೆ ಇನ್ನೂ ಬಹಿರಂಗಗೊಂಡಿಲ್ಲ. –ಏಜೆನ್ಸೀಸ್​
ಡಾಕ್ಟರ್​ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್​ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − ten =
Remember me
