ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಹಿಂಸಾಚಾರ ಸಂಬಂಧಿಸಿ ಇದುವರೆಗೆ 11 ದೂರುಗಳು ದಾಖಲಾಗಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಕ್ಯಾಂಪಸ್​ನಲ್ಲಿ ಜನವರಿ 5ರಂದು ನಡೆದ ಹಿಂಸಾಚಾರದ ಕುರಿತು ವಿವಿಯ ಪ್ರೊಫೆಸರ್ ಒಬ್ಬರು ಒಂದು ದೂರು ದಾಖಲಿಸಿದ್ದರೆ, ಉಳಿದವುಗಳನ್ನು ವಿದ್ಯಾರ್ಥಿಗಳು ದಾಖಲಿಸಿದ್ದಾರೆ. ಎಲ್ಲ ದೂರುಗಳು ಕ್ರೈಂ ಬ್ರಾಂಚ್​ಗೆ ವರ್ಗಾವಣೆಗೊಂಡಿದೆ ಎಂದು ದೆಹಲಿಯ ಡಿಸಿಪಿ ದೇವೇಂದರ್ ಆರ್ಯ ತಿಳಿಸಿದ್ದಾರೆ.
ಪರಿಸ್ಥಿತಿಯ ಅವಲೋಕನಕ್ಕಾಗಿ ಪೊಲೀಸರು ಸಿವಿಲ್ ಡ್ರೆಸ್​ನಲ್ಲಿ ಕ್ಯಾಂಪಸ್ ಒಳಗೆ ಹಾಗೂ ಸಮವಸ್ತ್ರದಲ್ಲಿರುವ ಪೊಲೀಸರು ಕ್ಯಾಂಪಸ್ ಹೊರಗೂ ಇರಲಿದ್ದಾರೆ. ಕ್ರೈಂ ಬ್ರಾಂಚ್ ಮತ್ತು ಫಾರೆನ್ಸಿಕ್​ ಸೈನ್ಸ್​ ಲ್ಯಾಬ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ.
ಘಟನಾವಳಿಗಳಿಗೆ ಸಂಬಂಧಿಸಿದ ವಿಡಿಯೋ ಸಾಕ್ಷ್ಯಗಳಿದ್ದರೆ ಹಂಚಿಕೊಳ್ಳುವಂತೆ ಪೊಲೀಸರು ಈಗಾಗಲೇ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ ಎಂದು ಆರ್ಯ ತಿಳಿಸಿದರು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − nine =
Remember me
