ಮುಂಬೈ:ವಾಣಿಜ್ಯ ನಗರಿ ಮುಂಬೈನಲ್ಲಿ ಐಟಿ ಇಂಜಿನಿಯರ್​ ಆಗಿ ಕೆಲಸ ಮಾಡುತ್ತಿರುವ ಅವಳಿ ಸಹೋದರಿಯರು ಇತ್ತೀಚೆಗಷ್ಟೇ ಅತುಲ್​ ಹೆಸರಿನ ಒಂದೇ ವ್ಯಕ್ತಿಯನ್ನು ಮದುವೆಯಾಗುವ ಮೂಲಕ ಭಾರಿ ಸುದ್ದಿಯಲ್ಲಿದ್ದಾರೆ. ಮದುವೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆದು, ಸಿಕ್ಕಾಪಟ್ಟೆ ವೈರಲ್ ಸಹ ಆಗಿದೆ. ಎರಡೂ ಕುಟುಂಬಗಳ ಒಪ್ಪಿಗೆ ಪಡೆದು ಶಾಸ್ತ್ರೋಕ್ತವಾಗಿ ಮದುವೆಯಾಗಿರುವ ನವದಂಪತಿಗೆ ವೈವಾಹಿಕ ಜೀವನದ ಆರಂಭದಲ್ಲೇ ವಿಘ್ನವೊಂದು ಎದುರಾಗಿದೆ.
ಅವಳಿ ಸಹೋದರಿಯರು ಮಂದಹಾಸ ಬೀರುತ್ತಾ ವರ ಅತುಲ್​ಗೆ ಹಾರ ಹಾಕುತ್ತಿರುವ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಅತುಲ್​ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೊದಲ ಸಂಗಾತಿಯು ಬದುಕಿರುವಾಗ ಅಥವಾ ಮೊದಲು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸದೆ ಮರುಮದುವೆಯಾಗುವುದು ಕಾನೂನುಬಾಹಿರ ಎಂಬ ಆಧಾರದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.
ಕೆಲವು ವರದಿಗಳ ಪ್ರಕಾರ ಅತುಲ್​ ಈಗಾಗಲೇ ಹಲವು ಮದುವೆಗಳಾಗಿದ್ದಾನೆಂದು ಆರೋಪಿಸಲಾಗಿದೆ. ಪ್ರಸ್ತುತ ನಡೆದ ಮದುವೆ ವಿಚಾರ ತಿಳಿದಕೂಡಲೇ ಮೊದಲ ಪತ್ನಿ ಅತುಲ್​ ವಿರುದ್ಧ ದೂರು ದಾಖಲಿಸಿರುವುದಾಗಿ ವರದಿಯಾಗಿದೆ. ಅಲ್ಲದೆ, ಮಹಾರಾಷ್ಟ್ರದ ಮಹಿಳಾ ಆಯೋಗವು ಅತುಲ್​ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ. ಆದರೆ, ಅವಳಿ ಸಹೋದರಿಯೇ ಸ್ವಇಚ್ಛೆಯಿಂದ ಅತುಲ್​ನನ್ನು ಮದುವೆ ಆಗಿದ್ದರೆ, ಕಾನೂನಿನಲ್ಲಿ ಖಂಡಿತವಾಗಿಯೂ ಅತುಲ್​ಗೆ ವಿನಾಯಿತಿ ನೀಡಬೇಕೆಂದು ಕೆಲವರು ಆಗ್ರಹಿಸಿದ್ದಾರೆ.
ವಿಡಿಯೋ ವೈರಲ್​ ಆದ ಬೆನ್ನಲ್ಲೇ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ ಮಾಡಿದ್ದರು. ಇನ್ನು ಕೆಲವರು ಇದಪ್ಪಾ ಅದೃಷ್ಟ ಅಂತಾ ಬಗೆಬಗೆಯ ಕಾಮೆಂಟ್​ ಮಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಂದಹಾಗೆ ಅವಳಿ ಸಹೋದರಿಯ ಹೆಸರು ಪಿಂಕಿ ಎಂ.ಪಡಗಾಂವ್ಕರ್ ಮತ್ತು ರಿಂಕಿ ಎಂ.ಪಡಗಾಂವ್ಕರ್. ಇವರು ಮುಂಬೈನಲ್ಲಿ ಟೆಕ್ಕಿಗಳಾಗಿದ್ದಾರೆ. ಚಿಕ್ಕಂದಿನಿಂದಲೂ ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದ ಕಾರಣ, ಒಬ್ಬರನ್ನೊಬ್ಬರು ಬಿಟ್ಟು ದೂರ ಇರಲಾಗದೇ ಇಬ್ಬರು ಸಹೋದರಿಯರು ಅತುಲ್ ಅವರನ್ನು ಮದುವೆಯಾಗಲು ನಿರ್ಧರಿಸಿದರು ಎಂದು ವರದಿಯಾಗಿದೆ.
ಅತುಲ್ ಕೂಡ​ ಮೊದಲಿನಿಂದಲೂ ಅವಳಿ ಸಹೋದರಿಯರ ಕುಟುಂಬಕ್ಕೆ ಪರಿಚಿತನಾಗಿದ್ದ. ಕೆಲ ದಿನಗಳ ಹಿಂದೆ ತಂದೆ ನಿಧನರಾದ ಹಿನ್ನೆಲೆಯಲ್ಲಿ ಸಹೋದರಿಯರು ತಾಯಿಯೊಂದಿಗೆ ವಾಸವಾಗಿದ್ದರು. ಯಾವಾಗ ತಾಯಿಗೂ ಅನಾರೋಗ್ಯ ಕಾಡಲು ಆರಂಭಿಸಿತೋ ಆಗ ಅತುಲ್ ಕಾರಿನಲ್ಲಿ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿಕೊಂಡು ಬರುತ್ತಿದ್ದರು. ಈ ವೇಳೆ ಅತುಲ್​ ಅವಳಿ ಸಹೋದರಿಯರ ಜೊತೆ ತುಂಬಾ ಸಲುಗೆ ಬೆಳೆಸಿಕೊಂಡಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.(ಏಜೆನ್ಸೀಸ್​)
ಒಂದೇ ಹುಡುಗನನ್ನು ಮದುವೆಯಾದ ಅವಳಿ ಸಹೋದರಿಯರು! ಕಾರಣ ಕೇಳಿದ್ರೆ ಹುಬ್ಬೇರಿಸ್ತೀರಾ

ಯುವಕನಿಂದ ಖಾಸಗಿ ಅಂಗಗಳ ಸ್ಪರ್ಶ! ಹಳದಿ ಬಣ್ಣದ ಬಟ್ಟೆಗೆ ಹೆದರುವ ನಟಿ ಐಶ್ವರ್ಯಾರ ನೋವಿನ ಕತೆಯಿದು

ಅರಮನೆಯಲ್ಲಿ ಹನ್ಸಿಕಾ ಮದುವೆ; ಸೊಹೈಲ್ ಖಟುರಿಯಾ ಜತೆ ಅದ್ಧೂರಿ ವಿವಾಹೋತ್ಸವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + seven =
Remember me
