ನವದೆಹಲಿ:ತಬ್ಲಿಘಿ ಜಮಾತ್​ನ ಮುಖ್ಯಸ್ಥ ಮೌಲಾನಾ ಸಾದ್ ಫಾರ್ಮ್​ ಹೌಸ್ ಮೇಲೆ ಗುರುವಾರ ಪೊಲೀಸರು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದ್ದಾರೆ. ಕರೊನಾ ವೈರಸ್ ಸೋಂಕು ಹರಡುವಲ್ಲಿ ಜಮಾತ್​ನ ಸಮಾವೇಶದ ಪಾಲೂ ಇದೆ ಎಂಬ ಆರೋಪ ಇದೆ. ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಸಾದ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಹುಡುಕುತ್ತಿದ್ದಾರೆ. ಉತ್ತರ ಪ್ರದೇಶದ ಶಾಮ್ಲಿಯಲ್ಲಿರುವ ಫಾರ್ಮ್ ಹೌಸ್​ನಲ್ಲಿ ಶೋಧ ನಡೆದಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಬಗ್ಗೆ ದೆಹಲಿ ಸರ್ಕಾರದ ಆದೇಶ ಜಾರಿಯಲ್ಲಿದ್ದರೂ ಮಾರ್ಚ್​ನಲ್ಲಿ ಸಮಾವೇಶ ನಡೆಸಲಾಗಿತ್ತು. ಅದರಲ್ಲಿ ಭಾಗವಹಿಸಿದ್ದ ದೇಶದ ಬೇರೆ ಬೇರೆ ಭಾಗಗಳ ನೂರಾರು ತಬ್ಲಿಘಿಗಳು ಕರೊನಾ ಪೀಡಿತರಾಗಿರುವುದು ಪತ್ತೆಯಾಗಿದೆ. ದೆಹಲಿ ಪೊಲೀಸರು ಮೌಲಾನಾ ಸಹಿತ ಏಳು ಜನರ ವಿರುದ್ಧ ಎಫ್​ಐಆರ್ ದಾಖಲಿಸಿದ್ದರು.
48 ತಾಸಿನಲ್ಲಿ 150 ತಬ್ಲಿಘಿಗಳ ಪತ್ತೆ:ದೆಹಲಿಯ ನಿಜಾಮುದ್ದೀನ್​ನಲ್ಲಿ ಕಳೆದ ತಿಂಗಳು ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದವರಲ್ಲಿ ಸುಮಾರು 150 ಸದಸ್ಯರನ್ನು ಉತ್ತರಪ್ರದೇಶ ಪೊಲೀಸರು 48 ತಾಸುಗಳ ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ. ಉತ್ತರಪ್ರದೇಶದಲ್ಲಿ ಸುಮಾರು 500 ಜನರು ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದ್ದು, ಈವರೆಗೆ ತಬ್ಲಿಘಿ ಸಭೆಯಲ್ಲಿ ಭಾಗಿಯಾಗಿದ್ದ 341 ವಿದೇಶಿಗರು ಸೇರಿ ತಬ್ಲಿಘಿಯ 3,204 ಸದಸ್ಯರನ್ನು ಬಂಧಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 10 =
Remember me
