ನವದೆಹಲಿ:ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಮುಖ್ಯಸ್ಥೆ ರೇಖಾ ಶರ್ಮಾ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಾಗಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್ ದಾಖಲಿಸಿದ ಒಂದು ದಿನದ ನಂತರ, ದೆಹಲಿ ಪೊಲೀಸರು ಸೋಮವಾರ ಸಾಮಾಜಿಕ ಮಾಧ್ಯಮ ಕಂಪನಿ ‘ಎಕ್ಸ್’ ನಿಂದ ಅವರು ಅಳಿಸಿರುವ ಕಾಮೆಂಟ್ ನ ವಿವರ ಕೇಳಿದ್ದಾರೆ.
ಇದನ್ನೂ ಓದಿ:ಹಿಂದಿ ಹಾಡುಗಳಿಗೆ ರಷ್ಯಾ ಕಲಾವಿದರ ನೃತ್ಯ..ಪ್ರಧಾನಿ ಮೋದಿ ಸ್ವಾಗತಿಸಿದ ಹಿರಿಯ ಉಪ ಪ್ರಧಾನಿ ಮಂಟುರೊವ್!
ಮೊಯಿತ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್​ಎಸ್​) ಸೆಕ್ಷನ್ 79 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಮಹಿಳೆಯ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಪದ, ಸನ್ನೆ ಅಥವಾ ಕೃತ್ಯವನ್ನು ಬಳಸುವುದಕ್ಕೆ ಸಂಬಂಧಿಸಿದ್ದಾಗಿದೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಏನಿತ್ತು ಎಂಬುದನ್ನು ನೋಡುವುದಾದರೆ, ಜುಲೈ 4 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಂಭವಿಸಿದ ಕಾಲ್ತುಳಿತದ ಸ್ಥಳಕ್ಕೆ ಶರ್ಮಾ ಭೇಟಿ ನೀಡುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಆದರೆ ಮೋಯಿತ್ರಾ ನಂತರ ಪೋಸ್ಟ್ ಅನ್ನು ಅಳಿಸಿದ್ದಾರೆ. ಅದರಲ್ಲಿ ಒಬ್ಬ ವ್ಯಕ್ತಿ ಛತ್ರಿ ಹಿಡಿದುಕೊಂಡು ಎನ್​ಸಿಡಬ್ಲ್ಯೂ ಮುಖ್ಯಸ್ಥರೊಂದಿಗೆ ನಡೆಯುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ದೆಹಲಿ ಪೊಲೀಸರು ‘X’ ಗೆ ಪತ್ರ ಬರೆದಿದ್ದಾರೆ ಮತ್ತು ಸಾಮಾಜಿಕ ಮಾಧ್ಯಮ ಕಂಪನಿಯಿಂದ ಉತ್ತರಕ್ಕಾಗಿ ಕಾಯುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ತನಿಖಾಧಿಕಾರಿಗಳು ಈಗಾಗಲೇ ಅದರ ‘ಸ್ಕ್ರೀನ್‌ಶಾಟ್‌ಗಳನ್ನು’ ತೆಗೆದುಕೊಂಡಿದ್ದರೂ, ಪೋಸ್ಟ್‌ನ ವಿವರಗಳು ತನಿಖೆಗೆ ಮುಖ್ಯವಾಗಿದೆ ಎಂದು ಮೂಲಗಳು ತಿಳಿಸಿವೆ. ಬೇಕಿದ್ದರೆ ಮುಂದಿನ ದಿನಗಳಲ್ಲಿ ಮೊಯಿತ್ರಾ ಅವರನ್ನು ಕರೆಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸ್ ‘ಇಂಟಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ ಯುನಿಟ್’ಗೆ ವಹಿಸಲಾಗಿದೆ. ಎನ್‌ಸಿಡಬ್ಲ್ಯು ಪೊಲೀಸ್ ಕಮಿಷನರ್‌ಗೆ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಈ ಹಿಂದೆ ಹೇಳಿದ್ದಾರೆ.-ಏಜನ್ಸೀಸ್​
ಪುಷ್ಪಾ-2 ವಿಲನ್ ಮೇಲೆ ಸುಮೋಟೋ ಕೇಸ್?! ಅಸಲಿಗೆ ಏನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 1 =
Remember me
