ಕೋಲ್ಕತ:ಅಡ್ಡಾದಿಡ್ಡಿ ಗುಂಡು ಹಾರಿಸಿದ ಪೊಲೀಸ್​ ಮಹಿಳೆಯೊಬ್ಬಳ ಸಾವಿಗೂ ಕಾರಣನಾಗಿದ್ದಲ್ಲದೆ ಕೊನೆಗೂ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಶ್ಚಿಮ ಬಂಗಾಳದಲ್ಲಿ ಇಂಥದ್ದೊಂದು ಘಟನೆ ನಡೆದಿದೆ.
ಕೋಲ್ಕತದ ಪಾರ್ಕ್ ಸರ್ಕಸ್​ ಕ್ರಾಸಿಂಗ್ ಬಳಿ ಹಾಡಹಗಲೇ ಈ ಗುಂಡಿನ ದಾಳಿ ನಡೆದಿದೆ. ಬಾಂಗ್ಲಾ ದೇಶ ಡೆಪ್ಯುಟಿ ಹೈ ಕಮಿಷನ್​ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಈ ಪೊಲೀಸ್​, ಕಚೇರಿಯಿಂದ ಸುಮಾರು 50 ಮೀಟರ್ ದೂರದಲ್ಲಿ ಗುಂಡಿನ ದಾಳಿ ನಡೆಸಿದ್ದಾನೆ.
ತನ್ನ ಸರ್ವಿಸ್​ ರೈಫಲ್​ನಿಂದ ಈತ ಗುಂಡು ಹಾರಿಸಲಾರಂಭಿಸಿದ್ದು, ಆ ಪೈಕಿ ಒಂದು ಗುಂಡು ದ್ವಿಚಕ್ರವಾಹನದಲ್ಲಿ ಹಿಂದೆ ಕುಳಿತುಕೊಂಡು ಹೋಗುತ್ತಿದ್ದ ಮಹಿಳೆಗೂ ತಗುಲಿದ್ದು, ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಬೈಕ್ ಚಲಾಯಿಸುತ್ತಿದ್ದವ ಕೂಡ ಗಾಯಗೊಂಡಿದ್ದು, ಆತ ತಪ್ಪಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದಾನೆ. ಬಳಿಕ ಪೊಲೀಸ್ ಅದೇ ರೈಫಲ್​​ನಿಂದ ತನಗೂ ಗುಂಡು ಹಾರಿಸಿಕೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಐದು ನಿಮಿಷಗಳಲ್ಲಿ ಇವೆಲ್ಲವೂ ನಡೆದುಹೋಗಿದ್ದು, ಸುಮಾರು 9 ಸುತ್ತು ಗುಂಡುಗಳನ್ನು ಹಾರಿಸಲಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈತ ಇಲ್ಲಿಗೆ ಇಂದಷ್ಟೇ ಇಲ್ಲಿಗೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರಿಂದ ಯಾರಿಗೂ ಈತನ ಪರಿಚಯ ಇರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಂಬಂದಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಹೆರಿಗೆ ಆದ 3 ವರ್ಷಗಳ ಬಳಿಕ ತಾಯಿಯ ಮಡಿಲನ್ನು ಸೇರಿದ ಮಗು; ಆಸ್ಪತ್ರೆ ಸಿಬ್ಬಂದಿಯ ಎಡವಟ್ಟು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − eight =
Remember me
