ಲಖನೌ:ಆಘಾತಕಾರಿ ಘಟನೆಯೊಂದರಲ್ಲಿ ಕರ್ತವ್ಯನಿರತ ಪೊಲೀಸ್​ ಅಧಿಕಾರಿಗಳು ಠಾಣೆಯೊಳಗೇ ಎಣ್ಣೆ ಪಾರ್ಟಿ ಮಾಡುತ್ತ ಸಂಭ್ರಮಿಸುತ್ತಿರುವ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯ ಮೊಹ್ಲಾ ರೈಲ್​ಪಾರ್​ ಕಂಟ್ರೋಲ್​ ರೂಮ್​ನಲ್ಲಿ ನಡೆದಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ.
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಮೂವರು ಅಧಿಕಾರಿಗಳು ಠಾಣೆಯೊಳಗೆ ಮದ್ಯ ಸೇವಿಸುತ್ತಾ ಆರಾಮಾಗಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಈ ವೇಳೆ ಅಧಿಕಾರಿಯೋರ್ವ ತನ್ನ ಸಹೋದ್ಯೋಗಿಗಳನ್ನು ಕಿಚ್ಚಾಯಿಸುತ್ತಿರುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮೂವರನ್ನು ಕರ್ತವ್ಯಲೋಪ ಆರೋಪದಡಿ ಅಮಾನತು ಮಾಡಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
डायल-112, आपकी सेवा में सदैव तत्पर !!📍जिला शामली, उत्तर प्रदेशpic.twitter.com/Jc1iUGCCEl
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 14 =
Remember me
