ಬೆಂಗಳೂರು:ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು ಹೊಸ ಸರ್ಕಾರಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
ಇನ್ನು ನೂತನ ಸರ್ಕಾರ ರಚನೆ ಬೆನ್ನಲ್ಲೇ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಸವರಾಜ್​ ಬೊಮ್ಮಾಯಿ, ಎಚ್​.ಡಿ. ಕುಮಾರಸ್ವಾಮಿ, ಸೇರಿದಂತೆ ಅನೇಕ ಗಣ್ಯರು ಶುಭ ಹಾರೈಸಿದ್ಧಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ, ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್​ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಕನ್ನಡದಲ್ಲಿ ಟ್ವೀಟ್​ ಮಾಡುವ ಮೂಲಕ ಪ್ರಧಾನಿ ಮೋದಿ ಶುಭ ಹಾರೈಸಿದ್ಧಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ@siddaramaiahಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ@DKShivakumarಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು.
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಶುಭ ಹಾರೈಸಿದ್ದಾರೆ.
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು.
ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್​ ಸರಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್​ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು.
ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್​ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜನತಾದಳ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಟ್ವೀಟ್​ ಮಾಡುವ ಮೂಲಕ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಶುಭ ಹಾರೈಸಿದ್ಧಾರೆ.
ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ@INCKarnatakaಸರಕಾರಕ್ಕೆ ಶುಭವಾಗಲಿ.ನೂತನ ಮುಖ್ಯಮಂತ್ರಿಗಳಾದ ಶ್ರೀ@siddaramaiahಅವರು, ಉಪ ಮುಖ್ಯಮಂತ್ರಿಗಳಾದ ಶ್ರೀ@DKShivakumarಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು. 1/2
ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್​ ಅವರಿಗೆ ನನ್ನ ಅಭಿನಂದನೆಗಳು.
ಈ ಜೋಡಿಯೂ ತಮ್ಮ ಸಮರ್ಥ ಆಡಳಿತದಿಂದ ಕರ್ನಾಟಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದ್ದಾರೆ ಎಂದು ನಾನು ನಂಬಿದ್ದೇನೆ. ದಕ್ಷಿಣದಲ್ಲಿ ಶುರುವಾದ ಅರುಣೋದಯವು ಭಾರತದಾದ್ಯಂತ ಹರಡಬೇಕು.
ಶನಿವಾರ ಬೆಂಗಳೂರಿನಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮವು ಬದಲಾವಣೆಯ ಘಂಟಘೋಷವಾಗಿದೆ ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್​ ಟ್ವೀಟ್​ ಮಾಡಿ ನೂತನ ಸರ್ಕಾರಕ್ಕೆ ಶುಭ ಹಾರೈಸಿದ್ಧಾರೆ.
Hearty congratulations to Hon'ble@siddaramaiahavaru and Hon'ble@DKShivakumaravaru on taking oath as the Chief Minister and Deputy Chief Minister of Karnataka respectively.I sincerely believe that the secular duo will take the state of#Karnatakato newer heights with their…pic.twitter.com/VxV6lRsskW

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 8 =
Remember me
