ಬೆಂಗಳೂರು:ಮಳೆ ಕೊರತೆಯ ನಡುವೆಯೂ ತಮಿಳುನಾಡಿಗೆ ನೀರು ಹರಿಸಿರುವ ಸರ್ಕಾರ ಬುಧವಾರ ಸರ್ವಪಕ್ಷ ಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿರೋಧ ಎದುರಿಸಲು ಸಜ್ಜಾಗಿದೆ. ಇದೇ ವೇಳೆ ಸರ್ಕಾರ ಕೂಡ ವಿವಿಧ ನೀರಾವರಿ ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡದ ಅಸ್ತ್ರವನ್ನು ಬತ್ತಳಿಕೆಯಲ್ಲಿ ಇಟ್ಟುಕೊಂಡಿದೆ.
ಬುಧವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ನಡೆಯಲಿದ್ದು, ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಪ್ರಮುಖ ನಾಯಕರಿಗೆ ಸರ್ಕಾರ ಆಹ್ವಾನ ನೀಡಿದೆ. ಕಾವೇರಿ ವಿಚಾರವಾಗಿ ಸುಪ್ರಿಂಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡುವುದಾಗಿ ಹೇಳಿರುವುದರಿಂದ, ಸಭೆಯಲ್ಲಿ ಸ್ಪಷ್ಟ ನಿರ್ಧಾರ ಅಥವಾ ನಿರ್ಣಯ ತೆಗೆದುಕೊಳ್ಳುವುದು ಅಷ್ಟು ಸಲೀಸಲ್ಲ. ಮುಂದೇನು ಮಾಡಬಹುದೆಂದು ಸರ್ಕಾರವು ಪ್ರತಿಪಕ್ಷಗಳ ನಾಯಕರಿಂದ ಅಭಿಪ್ರಾಯ ಪಡೆಯಲಿದೆ.
ಇದಕ್ಕೂ ಮುನ್ನ ಸರ್ಕಾರವು ಸಭೆಯ ಉದ್ದೇಶವನ್ನು ಪ್ರಸ್ತಾಪಿಸಲಿದ್ದು, ಕಾವೇರಿ ಕೊಳ್ಳದ ಜಲಾಶಯಗಳಲ್ಲಿನ ನೀರಿನ ಲಭ್ಯತೆ, ತಮಿಳುನಾಡಿನ ಒತ್ತಡದ ಬಗ್ಗೆ ವಿವರಿಸಲಿದೆ. ಇದಕ್ಕಾಗಿ ಜಲ ಸಂಪನ್ಮೂಲ ಇಲಾಖೆ ಸಭೆ ನಡೆಸಿ ಮಾಹಿತಿ ಸಿದ್ಧಮಾಡಿಕೊಂಡಿದೆ. ಇದಕ್ಕೆ ಪರ್ಯಾಯವಾಗಿ ಪ್ರತಿಪಕ್ಷ ಬಿಜೆಪಿ ಕಾವೇರಿ ವಿಚಾರದಲ್ಲಿ ಹೋರಾಟಕ್ಕಿಳಿದಿದ್ದು, ಅದೇ ಮೂಡ್​ನಲ್ಲಿರುವ ನಾಯಕರು ಸಭೆಯಲ್ಲಿ ತಮ್ಮ ಆಕ್ಷೇಪಗಳನ್ನೂ ದಾಖಲಿಸಲಿದ್ದಾರೆ. ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಈ ಬಗ್ಗೆ ವಿಚಾರ ವಿನಿಮಯ ನಡೆದಿದೆ.
ಸರ್ವಪಕ್ಷ ಸಭೆಯಲ್ಲಿ ಕಾವೇರಿ ಹೊರತಾಗಿ ಇತರೆ ನೀರಾವರಿ ಯೋಜನೆ ವಿಚಾರ ಪ್ರಸ್ತಾಪಿಸಬೇಕೆಂಬ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿದೆ. ಮಹದಾಯಿ, ಮೇಕೆದಾಟು ವಿಷಯದಲ್ಲಿ ಕೇಂದ್ರದ ಮಧ್ಯಸ್ಥಿಕೆ ಬಯಸುವುದು, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಹಣ ಬಿಡುಗಡೆ ಆಗದ ವಿಚಾರವನ್ನೂ ಸಭೆಯಲ್ಲಿ ಚರ್ಚೆ ಮಾಡುವುದು, ಕಾವೇರಿ ಸೇರಿ ಎಲ್ಲ ನೀರಾವರಿ ಯೋಜನೆ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ನಿಯೋಗ ಹೋಗುವ ಬಗ್ಗೆ ನಿರ್ಣಯಿಸಲು ಸಹ ಚಿಂತನೆ ನಡೆದಿದೆ.
ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡವಳಿಕೆ ಆಧಾರದಲ್ಲಿ ಎಲ್ಲವೂ ನಿರ್ಧಾರವಾಗಲಿದೆ. ಒಂದು ವೇಳೆ ಈ ವೇದಿಕೆ ಬಳಸಿಕೊಂಡು ಸರ್ಕಾರದ ಮೇಲೆ ಮುಗಿಬಿದ್ದರೆ ಪ್ರತಿಯಾಗಿ ಕೇಂದ್ರದ ಮೇಲೆ ಒತ್ತಡ ತರುವ ಅಸ್ತ್ರ ಪ್ರಯೋಗಿಸಲು ಸಹ ತೀರ್ವನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತ್ರಿಸದಸ್ಯ ಪೀಠ ರಚನೆ:ಕರ್ನಾಟಕ ನಿಗದಿತ ಪ್ರಮಾಣದಲ್ಲಿ ನೀರನ್ನು ಬಿಟ್ಟಿಲ್ಲ ಎಂದು ಆರೋಪಿಸಿ ತಮಿಳುನಾಡು ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ರಚಿಸಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಪಿ.ಎಸ್. ನರಸಿಂಹ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪೀಠದ ಸದಸ್ಯರಾಗಿದ್ದಾರೆ. ಶುಕ್ರವಾರದಂದು (ಆ.25) ಈ ನ್ಯಾಯಪೀಠ ಕಾವೇರಿ ವಿವಾದದ ಬಗ್ಗೆ ಎರಡೂ ರಾಜ್ಯಗಳ ವಾದವನ್ನು ಆಲಿಸಲಿದೆ.
ಎಚ್​ಡಿಕೆ ಹಾಜರಿ:ಕಾವೇರಿ ವಿಚಾರದ ಬಗ್ಗೆ ಚರ್ಚೆ ನಡೆಸಲು ಕರೆಯಲಾಗುವ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುತ್ತೇನೆ. ಅಲ್ಲಿ ನಮ್ಮ ಪಕ್ಷದ ನಿಲುವನ್ನು ಸ್ಪಷ್ಟವಾಗಿ ಹೇಳಲಾಗುವುದು ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ತಿಳಿಸಿದರು.
ಸರ್ವಪಕ್ಷ ಸಭೆಗೆ ಹೋಗಬೇಕಾದದ್ದು ನನ್ನ ಕರ್ತವ್ಯ. ತಮಿಳುನಾಡಿಗೆ ನೀರು ಬಿಟ್ಟ ಕೂಡಲೇ ಮೊದಲು ಧ್ವನಿ ಎತ್ತಿದವನೇ ನಾನು. ಸರ್ವಪಕ್ಷ ಸಭೆ ಕರೆಯಬೇಕು ಎಂದು ಒತ್ತಾಯ ಮಾಡಿದವನು ಕೂಡ ನಾನೇ ಎಂದು ಅವರು ಹೇಳಿಕೊಂಡರು.
ಆದರೆ, ರಾಜ್ಯದ ಹಿತ ಪರಿಗಣನೆಗೆ ಕ್ರಮ ಕೈಗೊಳ್ಳಬೇಕಾದ ಜಲಸಂಪನ್ಮೂಲ ಸಚಿವರೂ ಆದ ಉಪ ಮುಖ್ಯಮಂತ್ರಿ ಗಳು, ಯಾವುದೋ ಹಳೆಯ ಟ್ವೀಟ್ ಪ್ರಸ್ತಾಪ ಮಾಡಿದ್ದಾರೆ. ಆ ಟ್ವೀಟ್​ನಲ್ಲಿ ಏನು ಹೇಳಿದ್ದೇನೆ? ಎರಡೂ ರಾಜ್ಯಗಳ ಜನರು ಅಣ್ಣತಮ್ಮಂದಿರ ರೀತಿ ಇರಬೇಕೆಂದು ಹೇಳಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ನೂರಾರು ವರ್ಷ ಹೋರಾಟ ಮಾಡಿ ಆಗಿದೆ. ಈಗ ಕೊಟ್ಟು ತೆಗೆದುಕೊಳ್ಳುವ ಮನಸ್ಸು ಇರಬೇಕು. ತಮಿಳುನಾಡಿನ ರೈತರಿಗೆ ನಾವು ಎಂದೂ ದ್ರೋಹ ಮಾಡಿಲ್ಲ, ನಮ್ಮ ರಾಜ್ಯದ ರೈತರಿಗೆ ಅನ್ಯಾಯ ಮಾಡಬೇಡಿ ಅಂತ ಹೇಳಿದ್ದೇನಿ. ಸ್ಟಾಲಿನ್ ಅವರಿಗೆ ಈ ಮಾತು ಹೇಳಿದ್ದೀನಿ. ಇದರಲ್ಲಿ ಹುಳುಕು ಹುಡುಕುವಂತಹ ಅಂಶ ಏನಿದೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪ ಅವರನ್ನು ಮುಟ್ಟದಿದ್ದರೆ ಬಿಜೆಪಿ ಚೆನ್ನಾಗಿರುತ್ತಿತ್ತು: ರಾಜಗುರು ದ್ವಾರಕಾನಾಥ್

ರಾಜ್ಯದ 66 ಪೊಲೀಸ್​ ಇನ್​ಸ್ಪೆಕ್ಟರ್​ಗಳ ವರ್ಗಾವಣೆ; ಎಲ್ಲಿಗೆ ಯಾರು? ಇಲ್ಲಿದೆ ಪೂರ್ತಿ ವಿವರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − eleven =
Remember me
