ಅಹಮದಾಬಾದ್:ಗುಜರಾತ್​ನಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದೆ. ಸದ್ಯದಲ್ಲೇ ಎಲ್ಲಾ ಪಕ್ಷಗಳೂ ತಮ್ಮ ತಮ್ಮ ಅಭ್ಯರ್ಥಿಗಳ ಹೆಸರಿನ ಅಂತಿಮ ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆ ಇದೆ. ಇದೀಗ ಎಲ್ಲರ ಕುತೂಹಲ ಜಾಮ್​​ನಗರದ ಉತ್ತರ ವಿಧಾನಸಭಾ ಕ್ಷೇತ್ರದತ್ತ ಹೊರಳಿದೆ. ಇದಕ್ಕೆ ಕಾರಣ ಕ್ರಿಕೆಟಿಗ ಆಲ್​ರೌಂಡರ್ ರವೀಂದ್ರ ಜಡೇಜಾ ಪತ್ನಿ ಹಾಗೂ ಸಹೋದರಿ.
ಹೌದು ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ 2019ರಲ್ಲಿ ಬಿಜೆಪಿ ಪಕ್ಷ ಸೇರಿಕೊಂಡು, ಸಕ್ರೀಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತ ಜಡೇಜಾ ಸಹೋದರಿ, ನೈನಾ ಜಡೇಜಾ ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಜಡೇಜಾ ಪತ್ನಿ ಹಾಗೂ ಸೋದರಿ, ಒಂದೇ ಕ್ಷೇತ್ರದಲ್ಲಿ ಬೇರೆ ಬೇರೆ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ ಎನ್ನುತ್ತಿವೆ ರಾಜಕೀಯ ಮೂಲಗಳು.
ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಸೇರಿಕೊಂಡಿದ್ದ ಜಡೇಜಾ ಪತ್ನಿ ರಿವಾಬಾ, ನಂತರದಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡು, ಎಲ್ಲರಿಗೂ ಪರಿಚಿತರಾಗಿದ್ದಾರೆ. ಹೀಗಾಗಿ ಪ್ರಸ್ತುತ ಶಾಸಕರಾಗಿರುವ ಧರ್ಮೇಂದ್ರ ಸಿಂಗ್ ಅವರ ಬದಲು, ರಿವಾಬಾ ಜಡೇಜಾಗೆ ಬಿಜೆಪಿಯಿಂದ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ.
ಕಾಂಗ್ರೆಸ್​​ ಪಕ್ಷದಲ್ಲಿರುವ ಜಡೇಜಾ ಸಹೋದರಿ ನೈನಾ ಜಡೇಜಾ, ಸದ್ಯ ಕಾಂಗ್ರೆಸ್​​ನ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದು, ಪಕ್ಷದಲ್ಲಿ ಸಕ್ರೀಯವಾಗಿದ್ದಾರೆ. ಹೀಗಾಗಿ ಕಾಂಗ್ರೆಸ್​ನಿಂದ ನೈನಾ ಜಡೇಜಾ ಚುನಾವಣಾ ಕಣಕ್ಕಿಳಿಯುವುದು ಬಹುತೇಕ ಖಚತ ಆದಂತಿದೆ
ಹೀಗಾಗಿ ಇವರಿಬ್ಬರಿಗೂ ಟಿಕೆಟ್ ಲಭ್ಯವಾದಲ್ಲಿ, ಜಾಮ್​ನಗರ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಜಡೇಜಾ ಪತ್ನಿ ಹಾಗೂ ಸಹೋದರಿ ನಡುವೆ ಪ್ರಬಲ ಪೈಪೋಟಿ ಏರ್ಪಡುವುದು ನಿಶ್ಚಿತ. ಇದೀಗ ಈ ರಾಜಕೀಯ ಬೆಳವಣಿಗೆ ದೇಶದ ಗಮನ ಸೆಳೆಯುತ್ತಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
