ತಮಿಳುನಾಡು:ಭಾನುವಾರ (ಜು.29) ತಮಿಳುನಾಡಿನಲ್ಲಿ 24 ಗಂಟೆ ಕಳೆಯುವುದದೊಳಗೆ ಮೂರು ಪಕ್ಷದ ಪದಾಧಿಕಾರಿಗಳ ಹತ್ಯೆ ಸಂಭವಿಸಿದ್ದು, ಮೂರು ಪಾರ್ಟಿಯ ನಾಯಕರು ತಮಿಳುನಾಡಿನ ಸಿಎಂ ಸ್ಟಾಲಿನ್ ಹಾಗೂ ಕಾನೂನು ಸುವ್ಯವಸ್ಥೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎಐಎಡಿಎಂಕೆ, ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ಪ್ರತ್ಯೇಕ ರಾಜಕಾರಣಿಗಳನ್ನು ಕೊಲೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಆಯಾ ಪಕ್ಷದ ನಾಯಕರು ಆಡಳಿತ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ:ದಾಸವಾಳ ಚಹಾ ರೋಗಕ್ಕೆ ಮದ್ದು!; ವೈದ್ಯರ ಟೀಕೆ ಬೆನ್ನಲ್ಲೇ ಪೋಸ್ಟ್​​ ಡಿಲೀಟ್ ಮಾಡಿದ ನಯನತಾರಾ!
ಈ ಘಟನೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ತಮ್ಮ ಎಕ್ಸ್‌ ಖಾತೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೆಲ್ವಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ಶಿವಗಂಗೈ ಸಹಕಾರಿ ವಿಭಾಗದ ಜಿಲ್ಲಾ ಕಾರ್ಯದರ್ಶಿ ಸೆಲ್ವಕುಮಾರ್​ರನ್ನು ನಿನ್ನೆ ರಾತ್ರಿ ಸಮಾಜ ವಿರೋಧಿಗಳು ಕೊಲೆ ಮಾಡಿರುವುದು ಆಘಾತಕಾರಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅವರ ಕುಟುಂಬದವರ ಬೆಂಬಲಕ್ಕೆ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ. ಡಿಎಂಕೆ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯ ಕೊಲೆಗಳ ರಾಜಧಾನಿಯಾಗಿದೆ ಎಂದು ಆರೋಪಿಸಿದರು.
”ಸಮಾಜ ವಿರೋಧಿಗಳಿಗೆ ಸರ್ಕಾರ, ಪೊಲೀಸರ ಭಯವಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರನ್ನು ಕೈಯಲ್ಲಿಟ್ಟುಕೊಂಡು ಮುಖ್ಯಮಂತ್ರಿ ಹಗಲು ರಾಜಕೀಯ ನಾಟಕವಾಡುತ್ತಿದ್ದಾರೆ. ಇತಿಹಾಸದಲ್ಲಿ ಎಂದೂ ಈ ರೀತಿ ಆಗಿರಲ್ಲಿಲ್ಲ. ಪೊಲೀಸರನ್ನು ಕೂಲಿ ಇಲಾಖೆಯಾಗಿ ಪರಿವರ್ತಿಸಿದ್ದಾರೆ. ಇಡೀ ರಾಜ್ಯದ ಜನತೆ ಒಂದು ಕುಟುಂಬಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿರುವ ಹೀನಾಯ ಪರಿಸ್ಥಿಯಲ್ಲಿ ಸಿಎಂ ಆಗಿ ಮುಂದುವರೆಯಲು ಸ್ಟಾಲಿನ್​ರವರಿಗೆ ಯಾವ ನೈತಿಕ ಹಕ್ಕಿದೆ ಎಂದು ಅವರೇ ಯೋಚಿಸಲಿ ಎಂದು ಅಣ್ಣಮಲೈ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರು ಬೆಳವಣಿಗೆಗೆ ಕೆಂಪೇಗೌಡರ ದೂರದೃಷ್ಟಿ ಕಾರಣ: ಸಂಸದ ಡಾ. ಕೆ.ಸುಧಾಕರ್ ಹೇಳಿಕೆ
ಇದೇ ರೀತಿ ಎಐಎಡಿಎಂಕೆ ವಕ್ತಾರ ಕೋವೈ ಸತ್ಯನ್​ ಹಾಗೂ ಬಿಜೆಪಿ ವಕ್ತಾರ ಶೆಹಜಾದ್​ ಪೂನ್​ವಾಲಾ ಸಿಎಂ ಎಂ.ಕೆ. ಸ್ಟಾಲಿನ್ ವಿರುದ್ಧ ತೀವ್ರ ಕಿಡಿಕಾರಿದ್ದಾರೆ. ಸದ್ಯದ ವರದಿಗಳ ಪ್ರಕಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ಮತ್ತಷ್ಟು ಚುರುಕುಗೊಂಡಿದೆ,(ಏಜೆನ್ಸೀಸ್).
ಇದು ಸಂಭವಿಸಿದ್ರೆ ಖಂಡಿತ 2025ರ ಐಪಿಎಲ್​ನಲ್ಲಿ ಧೋನಿ! ‘ಕ್ಯಾಪ್ಟನ್​ ಕೂಲ್’​ ಎಂಟ್ರಿಗೆ ಫ್ಯಾನ್ಸ್​ ಒತ್ತಾಯ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:4 + 12 =
Remember me
