ನವದೆಹಲಿ:ಭಾರತದಲ್ಲಿ ಕರೊನಾ ವೈರಸ್​ ವಿರುದ್ಧದ ಹೋರಾಟದಲ್ಲಿ ಇವರು ಪ್ರಮುಖ ಪಾತ್ರ ವಹಿಸಿರುವ ಕೇಂದ್ರ ಆರೋಗ್ಯ ಖಾತೆ ಸಚಿವ ಡಾ. ಹರ್ಷ್​ ವರ್ಧನ್ ಅವರು ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಜಪಾನ್​ನ ಡಾ. ಹಿರೋಕಿ ನಕಟಾನಿ ಅವರು ಇಲ್ಲಿಯವರೆಗೆ ಈ ಹುದ್ದೆಯಲ್ಲಿದ್ದರು. ಅಧಿಕಾರ ಸ್ವೀಕಾರದ ನಂತರ ಕರೊನಾ ವೈರಸ್​ನಿಂದ ಮೃತಪಟ್ಟವರಿಗೆ ಹರ್ಷ್​ ವರ್ಧನ್​ ಸಂತಾಪ ಸೂಚಿಸಿದರು. ಕರೊನಾದಿಂದ ಉಂಟಾಗಿರುವ ಬಿಕ್ಕಟ್ಟನ್ನು ಎದುರಿಸಲು ಜಾಗತಿಕ ಸಹಭಾಗಿತ್ವ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಇದನ್ನೂ ಓದಿ:ಹೀಗೂ ಆಗುವುದುಂಟು: ವಾಯುವಿಹಾರಕ್ಕೆ ಹೋದಾಗ ಲಕ್ಷಾಧಿಪತಿ, ಕಸದೊಂದಿಗೆ ಬಂದಾಗ ಕೋಟ್ಯಧಿಪತಿ..!
ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಕಳೆದ ಮಂಗಳವಾರ (ಮೇ 19) ನಡೆದ 73 ನೇ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಎ) ಸಭೆಯಲ್ಲಿ ಇವರನ್ನು ಅಧ್ಯಕ್ಷರನ್ನಾಗಿ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಕಾರ್ಯಕಾರಿ ಮಂಡಳಿ ಮೂರು ವರ್ಷಗಳ ಅವಧಿಗೆ 34 ಸದಸ್ಯರನ್ನು ಇದೇ ವೇಳೆ ಆಯ್ಕೆ ಮಾಡಲಾಗಿದೆ.
ಭಾರತದ ಪ್ರತಿನಿಧಿಯನ್ನು ಕಾರ್ಯಕಾರಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಪ್ರಸ್ತಾವನೆಗೆ 194 ದೇಶಗಳನ್ನೊಳಗೊಂಡ ವಿಶ್ವ ಆರೋಗ್ಯ ಸಭೆಯಲ್ಲಿ ಸಹಿ ಮಾಡಲಾಗಿದೆ. ಸಾಮಾನ್ಯವಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಈ ಸ್ಥಾನಕ್ಕೆ ನಾಮನಿರ್ದೇಶನ ಮಾಡಲಾಗುತ್ತದೆ. ಆದರೆ, ಕೇಂದ್ರ ಸರ್ಕಾರವು ತನ್ನ ಸಚಿವರನ್ನೇ ಆ ಸ್ಥಾನಕ್ಕೆ ನೇಮಿಸಲು ನಿರ್ಧರಿಸಿದ್ದ ಹಿನ್ನೆಲೆಯಲ್ಲಿ ಹರ್ಷ್​ ಅವರ ಆಯ್ಕೆ ನಡೆದಿದೆ.
ಇದನ್ನೂ ಓದಿ:ನಿಮ್ಮ ಫೋನ್​ನಲ್ಲಿ ಗೂಗಲ್​ ಮ್ಯಾಪ್​ ಇದ್ಯಾ? ಹಾಗಿದ್ರೆ ಈ ಅಮಾಯಕ ಗಂಡನ ಕಥೆ ಕೇಳಿ..!
ಈ ಹುದ್ದೆಯನ್ನು ಭಾರತ ಸೇರಿದಂತೆ ಮೂರು ಆಗ್ನೇಯ ಏಷ್ಯಾ ರಾಷ್ಟ್ರಗಳಿಗೆ ನೀಡಲು ಕಳೆದ ವರ್ಷವೇ ನಿರ್ಧರಿಸಲಾಗಿತ್ತು. ಇದು ಪೂರ್ಣ ಸಮಯದ ಹುದ್ದೆ ಅಲ್ಲ. ಪೂರ್ಣಾವಧಿ ಕರ್ತವ್ಯ ನಿಭಾಯಿಸುವ ಅಗತ್ಯ ಸಂಸ್ಥೆಯಲ್ಲಿ ಇರುವುದಿಲ್ಲ. ವರ್ಷಕ್ಕೆ ಎರಡು ಬಾರಿ ನಡೆಯುವ (ದ್ವಿ-ವಾರ್ಷಿಕ) ಸಭೆಗಳ ನೇತೃತ್ವ ವಹಿಸುವುದು ಪ್ರಮುಖ ಕರ್ತವ್ಯವಾಗಿರುತ್ತದೆ. ಆರೋಗ್ಯ ಕ್ಷೇತ್ರಗಳಲ್ಲಿ ತಾಂತ್ರಿಕವಾಗಿ ಪರಿಣತರಾಗಿರುವ ವ್ಯಕ್ತಿಗಳನ್ನು ಇದಕ್ಕೆ ಆಯ್ಕೆ ಮಾಡಲಾಗುತ್ತದೆ.
ಮಾಜಿ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು 2016 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಇದೇ ರೀತಿಯ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು.
ಪಾಕಿಸ್ತಾನಕ್ಕೇ ಕೊಟ್​ ಬಿಟ್ರಲ್ಲ ಉಗುಳಿದ ಪಿಪಿಇ ಕಿಟ್​​! ಪಾನ್​ ಕಲೆ ನೋಡಿ ಬೆಚ್ಚಿಬಿದ್ದ ವೈದ್ಯರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
