ಮುಂಬೈ:ಇತ್ತೀಚಿನ ದಿನಗಳಲ್ಲಿ ರಾಜಕಾರಣವು ಐಪಿಎಲ್​​ನಂತಾಗಿದೆ. ಯಾರು, ಯಾವಾಗ ಯಾರ ಪರ ಆಡುತ್ತಾರೆ ಎಂಬುದನ್ನು ನಂಬುವುದಕ್ಕೆ ಸಾಧ್ಯವಿಲ್ಲ ಎಂದು ಮಹರಾಷ್ಟ್ರದ ಮಾಜಿ ಸಿಎಂ ಉದ್ಧವ್​ ಠಾಕ್ರೆ ಹೇಳಿದ್ದಾರೆ.ಇದನ್ನೂ ಓದಿ:ಹಸುಗೂಸಿನ ಮೃದುವಾದ ತೋಳು, ಕುತ್ತಿಗೆಯನ್ನು ಬ್ಲೇಡ್​​ನಿಂದ ಕೊಯ್ದ ತಂದೆ..!ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ವಿರುದ್ಧ ಕಟುವಾಗಿ ವಾಗ್ದಾಳಿ ನಡೆಸಿದ ಠಾಕ್ರೆ, ದೇಶದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ರಾಜಕೀಯ ಮಟ್ಟವು ಕೆಳಮಟ್ಟಕ್ಕೆ ತಲುಪಿದ್ದು, ಜನರು ಇದರಿಂದ ಅಸಮಾಧಾನಗೊಂಡಿದ್ದಾರೆ, ಸರ್ಕಾರವು ಇನ್ನೂ ಸಾರ್ವಜನಿಕರ ಬಗ್ಗೆ ತಲೆಕೆಡಿಸಿಕೊಂಡಂತೆ ತೋರುತ್ತಿಲ್ಲ. ನಿಮ್ಮ ಮನೆ ಬಾಗಿಲಿಗೆ ಸರ್ಕಾರ ಎಂಬ ಕಾರ್ಯಕ್ರಮ ಸರ್ಕಾರ ಜಾರಿ ಮಾಡಿದೆ ಆದರೆ ಸರ್ಕಾರ ಸಾರ್ವಜನಿಕರ ಮನೆಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಹೇಳಿದ್ದಾರೆ.ಇಂದು ಮುಖ್ಯಮಂತ್ರಿಯಾಗಿರುವ ಶಿಂಧೆ ಹಿಂದೆ ಠಾಕ್ರೆಯವರ ವಿಶ್ವಾಸಾರ್ಹ ಸಹಾಯಕರಾಗಿದ್ದರು. ಅವರ ನೇತೃತ್ವದ ಬಂಡಾಯವು, ಅಂದು ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿ ಬಿಜೆಪಿಯ ಅಧಿಕಾರಕ್ಕೆ ಮರಳಲು ದಾರಿ ಮಾಡಿಕೊಟ್ಟಿತು ಎಂದು ಠಾಕ್ರೆ ತಿಳಿಸಿದ್ದಾರೆ.ಇದನ್ನೂ ಓದಿ:ಸಮೋಸಾ ಆರ್ಡರ್ ಮಾಡಲು ಹೋಗಿ 1.40 ಲಕ್ಷ ರೂ. ಕಳೆದುಕೊಂಡ ವೈದ್ಯಇತ್ತೀಚೆಗೆ, ಶರದ್ ಪವಾರ್ ನೇತೃತ್ವದ ಎನ್‌ಸಿಪಿಯೂ ಕೂಡ ವಿಭಜನೆಯಾಗಿ, ಅವರ ಸೋದರಳಿಯ ಅಜಿತ್ ಪವಾರ್ ಬಿಜೆಪಿಗೆ ಬೆಂಬಲವನ್ನು ನೀಡಿದ್ದಾರೆ. ಸದ್ಯ ಅಜಿತ್​ ಪವಾರ್​​, ಬಿಜೆಪಿಯ ದೇವೇಂದ್ರ ಫಡ್ನವಿಸ್​​ರೊಂದಿಗೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಂಡಿದ್ದಾರೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 7 =
Remember me
