ಅಗರ್ತಲ:ದುರ್ಗಾಪೂಜೆ ಸಮಯದಲ್ಲಿ ಖ್ಯಾತ ಯುವ ಗಾಯಕಿಗೆ ದುಷ್ಕರ್ಮಿಗಳ ಗುಂಪೊಂದು ಲೈಂಗಿಕ ಕಿರುಕುಳ ನೀಡಿ, ಹಲ್ಲೆ ಮಾಡಿರುವ ಘಟನೆ ತ್ರಿಪುರಾ ರಾಜಧಾನಿ ಅಗರ್ತಲದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಗಾಯಕಿಗೆ ಮಾತ್ರವಲ್ಲದೆ ಆಕೆಯ ಬಾಯ್​ಫ್ರೆಂಡ್​ ಮೇಲೆಯೂ ದುಷ್ಕರ್ಮಿಗಳು ಸಾರ್ವಜನಿಕ ಪ್ರದೇಶದಲ್ಲೇ ಹಲ್ಲೆ ಮಾಡಿದ್ದಾರೆ. ಅಪರಾಧ ಎಸಗಿದ್ದಲ್ಲದೆ ರೆಕಾರ್ಡ್​ ಮಾಡಿಕೊಂಡಿದ್ದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.
ಇದನ್ನೂ ಓದಿ:ಒಂಬತ್ತು ವರ್ಷ ಜತೆಗಿದ್ದು ಕೈಕೊಟ್ಟ ಲವರ್​ ಮೇಲೆ ಆಸಿಡ್​ ದಾಳಿ ನಡೆಸಿದ ಮಹಿಳೆಯ ಬಂಧನ!
ಸದ್ಯ ಪ್ರಕರಣದ ಪ್ರಮುಖ ಆರೋಪಿ ಸಂಜಿತ್​ ಬರ್ಮನ್​ ಎಂಬಾತನನ್ನು ಅಗರ್ತಲ ಪೊಲೀಸರು ಬಂಧಿಸಿದ್ದಾರೆ. ದುಷ್ಕರ್ಮಿಗಳು ಲೈಂಗಿಕ ಕಿರುಕುಳ ನೀಡಿದ್ದಲ್ಲದೆ. ಕೆಟ್ಟ ಪದಗಳಿಂದಲೂ ನಿಂದಿಸಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದಾಗಿನಿಂದ ಆರೋಪಿಗಳನ್ನು ಬಂಧಿಸುವಂತೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು. ಗಾಯಕಿಗೆ ನ್ಯಾಯ ಕೊಡಿಸುವಂತೆ ಒತ್ತಾಯಗಳು ಕೇಳಿಬಂದಿದ್ದವು.
ಇದೀಗ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿ ಸಂಜಿತ್​ ಬರ್ಮನ್​ನನ್ನು ವಿಚಾರಣೆಗೆ ಒಳಪಡಿಸಿದ್ದು, ಆತ ನೀಡುವ ಹೇಳಿಕೆ ಆಧಾರದ ಮೇಲೆ ಇನ್ನುಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.(ಏಜೆನ್ಸೀಸ್​)

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × four =
Remember me
