ಗುರ್ಗಾಂವ್​:ಆರು ಕಿ.ಮೀ ಉದ್ದದ ನಿರ್ಮಾಣ ಹಂತದ ಫ್ಲೈಓವರ್​ನ ಒಂದು ಭಾಗ ಕುಸಿತಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಗುರ್ಗಾಂವ್​ನಲ್ಲಿ ನಡೆದಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಹಿತಿ ತಿಳಿದ ಪೊಲೀಸರು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದರು. ಫ್ಲೈವರ್​ ಕುಸಿತಗೊಂಡ ಏರಿಯಾ ಜನನಿಬಿಡ ಸೊಹನ್​ ರಸ್ತೆಯಾಗಿದ್ದರಿಂದ ರಸ್ತೆ ಮೇಲೆ ಬಿದ್ದಿದ್ದ ಭಾರಿ ಗಾತ್ರದ ಸಿಮೆಂಟ್​ ಬ್ಲಾಕ್ಸ್​ ಅನ್ನು ಯಂತ್ರದ ಸಹಾಯದಿಂದ ತೆರವುಗೊಳಿಸಲಾಯಿತು.
ಇದನ್ನೂ ಓದಿ:ದಾವೂದ್​ ತನ್ನ ನೆಲದಲ್ಲಿಯೇ ಇದ್ದಾನೆಂದು ಒಪ್ಪಿಕೊಂಡ ಪಾಕ್​; ಆರ್ಥಿಕ ದಿಗ್ಬಂಧನದಿಂದ ಪಾರಾಗಲು ತಂತ್ರ…?
ಘಟನೆಯಲ್ಲಿ ಕೆಲವೊಂದು ಕಾರುಗಳು ಸಹ ಜಖಂಗೊಂಡಿವೆ. ಕಳೆದ ಕೆಲವು ದಿನಗಳಿಂದ ಗುರ್ಗಾಂವ್​ನಲ್ಲಿ ಭಾರಿ ಮಳೆಯಾಗುತ್ತಿದೆ. ಈ ಕಾರಣದಿಂದಲೇ ಫ್ಲೈಓವರ್​ ಒಂದು ಭಾಗ ಕುಸಿದಿದೆ ಎಂದು ಹೇಳಲಾಗಿದೆ. ಆದರೆ, ಕಳಪೆ ಕಾಮಗಾರಿ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.(ಏಜೆನ್ಸೀಸ್​)
https://www.vijayavani.net/thousands-protest-across-israel-after-girl-16-was-gang-raped-by-30-men-in-a-hotel/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
