ನವದೆಹಲಿ:ಸಾಮಾಜಿಕ ಜಾಲತಾಣದ ದಿಗ್ಗಜ ಕಂಪನಿ ಫೇಸ್​ಬುಕ್ ತನ್ನ ಹೆಸರನ್ನು ಬದಲಾವಣೆ ಮಾಡಲು ಬಯಸಿದ್ದು, ಮುಂದಿನ ವಾರ ಅದಕ್ಕೆ ಮರುನಾಮಕರಣ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಫೇಸ್​ಬುಕ್​ನ ಸಿಇಒ ಮಾರ್ಕ್ ಜುಕರ್​ಬರ್ಗ್ ಕಂಪನಿಯ ಹೆಸರು ಬದಲಾವಣೆ ಮಾಡುವ ಕುರಿತು ಅಕ್ಟೋಬರ್ 28ರಂದು ನಡೆಯಲಿರುವ ವಾರ್ಷಿಕ ಸಭೆಯಲ್ಲಿ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ. ಆದರೆ, ಹೊಸ ಹೆಸರು ಯಾವುದು ಎಂಬ ಸುಳಿವು ನೀಡಿಲ್ಲ. ಫೇಸ್​ಬುಕ್​ನ ವ್ಯವಹಾರ ಕುರಿತು ಅಮೆರಿಕದ ಆಡಳಿತ ಪರಿಶೀಲನೆ, ತಪಾಸಣೆಯನ್ನು ಹೆಚ್ಚಿಸಿರುವುದು ಕಂಪನಿಗೆ ತಲೆನೋವಾಗಿದೆ. ಹೀಗಾಗಿ ಹೆಸರು ಬದಲಾವಣೆ ಮಾಡಬೇಕು ಎಂಬ ಆಲೋಚನೆಯನ್ನು ಫೇಸ್​ಬುಕ್ ಮಾಡಿದೆ ಎನ್ನಲಾಗಿದೆ. ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರಕ್ರಿಯಿಸಿರುವ ಫೇಸ್​ಬುಕ್, ಊಹಾಪೋಹ ಮತ್ತು ವದಂತಿಗಳಿಗೆ ಉತ್ತರಿಸುವ ಪರಿಪಾಠ ನಮ್ಮಲ್ಲಿ ಇಲ್ಲ ಎಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
