ಲಕ್ನೋ:ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ಮೇಲೆ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಗೋರಖ್​ಪುರದ ಗೋರಖನಾಥ್​ ದೇವಾಲಯದಲ್ಲಿ ದಾಳಿ ನಡೆಯುವ ಸಾಧ್ಯತೆ ಇದೆ. ದಾಳಿಕೋರ ಪತ್ರಕರ್ತರ ವೇಷದಲ್ಲಿ ದೇವಾಲಯ ಪ್ರವೇಶ ಮಾಡಬಹುದು ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಗುಪ್ತಚರ ಮಾಹಿತಿ ಆಧಾರದ ಮೇಲೆ ದೇವಾಲಯದ ಭದ್ರತೆಯನ್ನು ಅಧಿಕಗೊಳಿಸಲಾಗಿದೆ. ಅಲ್ಲದೆ ಪತ್ರಕರ್ತರ ಎಲ್ಲ ಮಾಹಿತಿ ಪಡೆದು ಅವರಿಗೆ ಹೊಸದಾಗಿ ಗುರುತಿನ ಪತ್ರ ನೀಡಬೇಕು ಎಂದು ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಲಖನೌದಲ್ಲಿ ಪತ್ರಕರ್ತರಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ ಗೋರಖ್​ಪುರದಲ್ಲಿ ಅವರು ಪತ್ರಕರ್ತರೊಂದಿಗೆ ಬೆರೆಯುತ್ತಾರೆ. ಗೋರಖನಾಥ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಜನತಾ ದರ್ಬಾರ್​ ನಡೆಸಿ ಸ್ಥಳೀಯ ಜನರ ಸಮಸ್ಯೆ ಆಲಿಸುತ್ತಾರೆ. ಇದನ್ನೇ ಬಳಸಿಕೊಂಡು ಅವರ ಮೇಲೆ ದಾಳಿ ನಡೆಸಲು ಸಂಚು ನಡೆದಿದೆ ಎಂದು ಗುಪ್ತಚರ ದಳ ಮಾಹಿತಿ ರವಾನಿಸಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + twenty =
Remember me
