ಜಮ್ಮು:ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ದೇವಸ್ಥಾನದ ಮೇಲೆ ದಾಳಿ ನಡೆಸುವುದಕ್ಕೆ ಸಿದ್ಧರಾಗಿದ್ದ ನಾಲ್ವರು ಉಗ್ರರನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಅವರ ಬಳಿ ಇದ್ದ ಆರು ಗ್ರೆನೇಡ್​ಗಳನ್ನು ವಶಪಡಿಸಿಕೊಂಡು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತು ಪ್ರತಿಕ್ರಿಯಿಸಿರುವ ಪೂಂಛ್​ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಕುಮಾರ್​ ಆಂಗ್ರಾಲ್​, ಸ್ಥಳೀಯ ಪೊಲೀಸರು ಮತ್ತು ವಿಶೇಷ ಕಾರ್ಯಾಚರಣೆ ಗುಂಪು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಿನ್ನೆ ರಾತ್ರಿ ಸಹೋದರರಿಬ್ಬರನ್ನು ವಾಹನ ತಪಾಸಣೆ ವೇಳೆ ಮೆಂಧಾರ್ ಸೆಕ್ಟರ್​ನ ಬಸೂನಿ ಸಮೀಪ ಬಂಧಿಸಿದ್ದಾರೆ. ಬಂಧಿತರನ್ನು ಮುಸ್ತಾಫಾ ಇಕ್ಬಾಲ್​ ಮತ್ತು ಮುರ್ತಾಝ ಇಕ್ಬಾಲ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಅಪ್ಪನ ಆಸ್ತಿಗೆ ವಿಲ್‌ ಮಾಡದೇ ಅಮ್ಮ ಮೃತಪಟ್ಟಳು- ಅದನ್ನು ಭಾಗ ಮಾಡುವುದು ಹೇಗೆ?
ಬಸೂನಿಯಲ್ಲಿರುವ ರಾಷ್ಟ್ರೀಯ ರೈಫಲ್ಸ್​ ಕೇಂದ್ರ ಕಚೇರಿಯಲ್ಲಿ ಬಂಧಿತರ ವಿಚಾರಣೆ ನಡೆಸುತ್ತಿದ್ದ ವೇಳೆ, ಮುಸ್ತಾಫಾನ ಫೋನ್​ಗೆ ಪಾಕಿಸ್ತಾನದ ನಂಬರ್​ನಿಂದ ಕರೆ ಬಂದಿತ್ತು. ಇದೇ ಸಂದರ್ಭದಲ್ಲಿ ಅವರು ಅರಿ ಗ್ರಾಮದಲ್ಲಿ ದೇವಸ್ಥಾನದ ಮೇಲೆ ದಾಳಿ ನಡೆಸುವುದಕ್ಕೆ ಸಿದ್ಧತೆ ನಡೆಸುತ್ತಿದ್ದುದಾಗಿ ಹೇಳಿಕೊಂಡಿದ್ದಾರೆ. ಅವರ ಹೇಳಿಕೆ ಆಧರಿಸಿ ಆರೋಪಿಗಳ ಮನೆ ತಲಾಶ್ ಮಾಡಿದಾಗ ಆರು ಗ್ರೆನೇಡ್​ಗಳು ಪತ್ತೆಯಾಗಿವೆ. ಗ್ರೆನೇಡ್ ಬಳಸುವ ಬಗೆ ಹೇಗೆ ಎಂಬ ತರಬೇತಿ ವಿಡಿಯೋ ಕೂಡ ಆತನ ಬಳಿ ಇತ್ತು. ಜಮ್ಮು-ಕಾಶ್ಮೀರ ಘಜ್ನವಿ ಫೋರ್ಸ್​ನ ಪೋಸ್ಟರ್​ ಕೂಡ ಪತ್ತೆಯಾಗಿದೆ.
ಇದನ್ನೂ ಓದಿ:ಗಾಂಧಿ ನಗರದ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ
ಇನ್ನೊಂದೆಡೆ ಬಾಲಾಕೋಟ್​ ಸೆಕ್ಟರ್​ನ ಗಡಿ ನಿಯಂತ್ರಣ ರೇಖೆ ಸಮೀಪದ ದಾಬಿ ಗ್ರಾಮದಲ್ಲಿದ್ದ ಇಬ್ಬರು ಶಂಕಿತ ಉಗ್ರರನ್ನೂ ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಆಂಗ್ರಾಲ್ ತಿಳಿಸಿದ್ದಾರೆ. (ಏಜೆನ್ಸೀಸ್)ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ನಾಪತ್ತೆಯಾಗಿದ್ದ ಎಸ್​ಪಿಒ ಜೆಇಎಂ ಉಗ್ರನಾಗಿ ಪತ್ತೆ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + thirteen =
Remember me
