ಅಮರಾವತಿ:ಯಂಗ್​ ರೆಬೆಲ್​​ ಸ್ಟಾರ್​, ಡಾರ್ಲಿಂಗ್​ ಪ್ರಭಾಸ್​ ನಟನೆಯ, ಪ್ರಶಾಂತ್​ ನೀಲ್​ ನಿರ್ದೇಶನದ ಬಹುನಿರೀಕ್ಷಿತ ಸಲಾರ್​ ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಓಪನಿಂಗ್​ ಪಡೆದುಕೊಂಡಿದೆ. ಸಂಭ್ರಮದ ನಡುವೆಯೆ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ವಿದ್ಯುತ್​ ಸ್ಪರ್ಶಿಸಿ ಅಭಿಮಾನಿಯೊಬ್ಬರು ಮೃತಪಟ್ಟಿದ್ದಾರೆ.
ಘಟನೆಯು ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂನಲ್ಲಿ ನಡೆದಿದ್ದು, ಮೃತರನ್ನು ಬಾಲರಾಜು (27) ಎಂದು ಗುರುತಿಸಲಾಗಿದೆ. ಧರ್ಮಾವರಂನ ರಂಗ ಥಿಯೇಟರ್ ಮುಂಭಾಗ ಫ್ಲೆಕ್ಸ್​ ಕಟ್ಟುವ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಉಗ್ರಗಾಮಿ ಸಂಘಟನೆಗಳಿಗೆ ಹಣ ಸಂದಾಯ; ಭಾರತ ವಿರುದ್ಧ ಪ್ರಬಲ ಸಾಕ್ಷ್ಯವಿದೆ: ಪಾಕಿಸ್ತಾನ ಆರೋಪ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಬಾಲರಾಜು ಹಾಗೂ ಸ್ನೇಹಿತರು ಸಲಾರ್​ ಚಿತ್ರ ಬಿಡುಗಡೆ ನಿಮಿತ್ತ ರಂಗ ಥಿಯೇಟರ್​ ಮುಂಭಾಗದಲ್ಲಿ ಫ್ಲೆಕ್ಸ್​ ಕಟ್ಟುವ ವೇಳೆ ದುರ್ಘಟನೆ ಸಂಭವಿಸಿದೆ. ವಿದ್ಯುತ್​ ಸ್ಪರ್ಶಿಸಿ ಬಾಲರಾಜು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದು, ವಿದ್ಯುತ್ ತಂತಿಗಳು ಕಡಿಮೆ ಎತ್ತರದಲ್ಲಿ ಇದ್ದಿದ್ದರಿಂದ ಅವಘಡ ಸಂಭವಿಸಿದೆ ಎಂದು ಬಾಲರಾಜು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 9 =
Remember me
