ನವದೆಹಲಿ:2019ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ) ಪರೀಕ್ಷಾ ಫಲಿತಾಂಶ ಮಂಗಳವಾರ ಮಧ್ಯಾಹ್ನ ಪ್ರಕಟವಾಗಿದ್ದು, ಪುರುಷ ಅಭ್ಯರ್ಥಿಗಳಲ್ಲಿ ಪ್ರದೀಪ್​ ಸಿಂಗ್ ಹಾಗೂ ಮಹಿಳಾ ಅಭ್ಯರ್ಥಿಗಳಲ್ಲಿ ಪ್ರತಿಭಾ ವರ್ಮಾ ಟಾಪರ್ಸ್​ಗಳಾಗಿ ಹೊರಹೊಮ್ಮಿದ್ದಾರೆ.
ವಿವಿಧ ನಾಗರಿಕ ಸೇವೆಗಳಿಗೆ ಒಟ್ಟು 829 ಅಭ್ಯರ್ಥಿಗಳು 2019ನೇ ಸಾಲಿನ ಯುಪಿಎಸ್​ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ಅಂತಿಮ ಫಲಿತಾಂಶವನ್ನು ಯುಪಿಎಸ್​ಸಿ ಅಧಿಕೃತ ವೆಬ್​ಸೈಟ್​ನಲ್ಲಿ ನೋಡಬಹುದಾಗಿದೆ.
ಕಳೆದ ಸೆಪ್ಟೆಂಬರ್​ನಲ್ಲಿ ನಡೆದ ಲಿಖಿತ ಪರೀಕ್ಷೆ ಮತ್ತು 2020ರ ಫೆಬ್ರವರಿ-ಆಗಸ್ಟ್​ನಲ್ಲಿ ನಡೆದ ಸಂದರ್ಶನ ಅಥವಾ ವ್ಯಕ್ತಿತ್ವ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಆಧಾರದ ಮೇಲೆ ಇಂದು ಅಂತಿಮ ಫಲಿತಾಂವನ್ನು ಪ್ರಕಟಿಸಲಾಗಿದೆ.
ಒಟ್ಟಾರೆ ಅಭ್ಯರ್ಥಿಗಳಲ್ಲಿ 2019ರಲ್ಲಿ ಮೊದಲ ಬಾರಿಗೆ ಅನುಷ್ಠಾನಕ್ಕೆ ತರಲಾದ ಇವಿಎಸ್​ (ಆರ್ಥಿಕ ದುರ್ಬಲ ವರ್ಗ) ಕೋಟಾ ಅಡಿಯಲ್ಲಿ 78 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. 11 ಅಭ್ಯರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿದೆ.
ಪ್ರಸಕ್ತ 2020ನೇ ಸಾಲಿನ ಯುಪಿಎಸ್​ಸಿ ಪರೀಕ್ಷೆ ಮೇ 31ರಂದು ನಡೆಯಬೇಕಿತ್ತು. ಆದರೆ, ಕರೊನಾ ವೈರಸ್​ ಬಿಕ್ಕಟ್ಟಿನಿಂದಾಗಿ ಅಕ್ಟೋಬರ್​ 4ಕ್ಕೆ ವೇಳಾಪಟ್ಟಿ ಮರುನಿಗದಿಪಡಿಸಲಾಗಿದೆ.(ಏಜೆನ್ಸೀಸ್​)
https://twitter.com/animesh43087892/status/1290556880452952065?s=20
ನೀರಲ್ಲಿ ಕಾಯುತ್ತಿದ್ದ ಜವರಾಯ ಅಪ್ಪ-ಮಗನನ್ನೂ ಬಿಡಲಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
