ಬೆಂಗಳೂರು:ಮಲೇಷಿಯಾದ ಜೋಹರ್‌ನಲ್ಲಿ ನಡೆದ ೩ನೇ ಏಷ್ಯನ್ ಲಾನ್ ಬೌಲ್ ಚಾಂಪಿಯನ್​ಶಿಪ್‌ನ ಡಬಲ್ಸ್ ವಿಭಾಗದಲ್ಲಿ ಕರ್ನಾಟಕದ ಅಂತಾರಾಷ್ಟ್ರೀಯ ದಿವ್ಯಾಂಗ ಕ್ರೀಡಾಪಟು ಪಿ. ರಾಘವೇಂದ್ರ ಬೆಳ್ಳಿ ಪದಕ ಗಳಿಸಿದ್ದಾರೆ. ಹರ್ಯಾಣದ ವಿಕಾಸ್ ನರ್ವಾಲ್ ಅವರ ಜೊತೆ ಸೇರಿ ಈ ಸಾಧನೆ ಮಾಡಿದ್ದಾರೆ. ಈ ಕ್ರೀಡೆಯಲ್ಲಿ ಭಾರತಕ್ಕೆ ಇದು ಮೊದಲ ಪದಕವಾಗಿದೆ.
ರಾಜ್ಯ ಔಷಧ ನಿಯಂತ್ರಣ ಇಲಾಖೆಯ ಉದ್ಯೋಗಿ ಆಗಿರುವ ರಾಘವೇಂದ್ರ ಅವರ ಸಾಧನೆಗೆ ಭಾರತೀಯ ಪ್ಯಾರಾಲಂಪಿಕ್ಸ್ ಸಮಿತಿ ಅಭಿನಂದನೆ ಸಲ್ಲಿಸಿದೆ.
ರಾಘವೇಂದ್ರ ಅವರು ಕಳೆದ ವಾರ ಲಂಡನ್‌ನಲ್ಲಿ ನಡೆದ ಕಾಮನ್‌ವೆಲ್ತ್ ಪ್ಯಾರಾಲಂಪಿಕ್ಸ್​​ನ ಕತ್ತಿವರೆಸೆಯಲ್ಲಿ 2 ಬೆಳ್ಳಿ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದುಕೊಟ್ಟು ಮಹತ್ವದ ಸಾಧನೆ ಮಾಡಿದ್ದರು.
ರಾಘವೇಂದ್ರ ಅವರು 2020ರಲ್ಲಿ ಲಂಡನ್ ನಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಇಪೀ ವೈಯಕ್ತಿಕ ವಿಭಾಗದಲ್ಲಿ ಸ್ಪರ್ಧಿಸಿ ಬೆಳ್ಳಿ ಹಾಗೂ ಗ್ರೂಪ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + 1 =
Remember me
