ಯಾದಗಿರಿ:ಮಾಜಿ ಪ್ರಧಾನಿ ದೇವೇಗೌಡರೇ ಪ್ಲಾನ್ ಮಾಡಿ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ಕೆಳಗಿಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮ: ಆರ್. ಅಶೋಕ್
ಲೈಂಗಿಕ ಕಿರುಕುಳದ ವೀಡಿಯೋ ವೈರಲ್ ಆದ ಬಳಿಕ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಜ್ವಲ್ ಸಿ.ಡಿ ಕೇಸ್‌ಗೂ ಡಿಸಿಎಂ ಡಿಕೆ ಶಿವಕುಮಾರ್‌ಗೂ ಸಂಬಂಧವಿಲ್ಲ. ಸೂರಜ್ ರೇವಣ್ಣ ಜೊತೆ ಪೋಟೋ ಇರೋದಕ್ಕೆ ಏನಾಗುತ್ತೆ? ಕುಮಾರಸ್ವಾಮಿ ಜೊತೆಗೂ ಡಿ.ಕೆ.ಶಿವಕುಮಾರ್ ಪೋಟೋ ಇದೆ. ಹಾಗಾದ್ರೆ ನಂದು ರೇವಣ್ಣನ ಜೊತೆ ಪೋಟೋ ಇದ್ದರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥನಾ ಎಂದು ಪ್ರಶ್ನಿಸಿದರು.
ಪೆನ್‌ಡ್ರೈವ್ ಹಿಂದೆ ಡಿಕೆಶಿ ಕೈವಾಡ ಇದೆ ಎನ್ನುವ ಹೆಚ್‌ಡಿಕೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾರ್ತಿಕ್ ಯಾರ ಡ್ರೈವರ್? ಪ್ರಜ್ವಲ್ ಡ್ರೈವರ್. ಪೆನ್‌ಡ್ರೈವ್ ಬಿಜೆಪಿ ಮುಖಂಡನ ಕೈಯಲ್ಲಿ ಕೊಟ್ಟಿದ್ದು. ಕುಮಾರಸ್ವಾಮಿ ರಾಜಕೀಯವಾಗಿ ಡಿಕೆಶಿ ಮೇಲೆ ಆರೋಪ ಮಾಡುತ್ತಾರೆ. ಅಮಿತ್ ಶಾ ಅವರಿಗೆ ಗೊತ್ತಿದ್ದರೂ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್‌ಗೆ ಟಿಕೆಟ್ ಯಾಕೆ ಕೊಟ್ಟರು? ಸೆಕ್ಸ್ ಸ್ಕ್ಯಾಂಡಲ್‌ನಲ್ಲಿ ಸಿಲುಕಿಕೊಂಡವನಿಗೆ ಯಾಕೆ ಟಿಕೆಟ್ ಕೊಟ್ಟರು? ಎಸ್‌ಐಟಿಯಿಂದ ಪಾರದರ್ಶಕವಾಗಿ ತನಿಖೆ ಆಗುತ್ತೆ ಎಂದರು.
ವಲಸಿಗರಿಗಾಗಿ ಕಾನೂನು ತಿದ್ದುಪಡಿ..ಕತಾರ್‌ ಸಂಪುಟ ಅನುಮೋದನೆ…ಇದರಿಂದ ಭಾರತೀಯರಿಗೇನು ಪ್ರಯೋಜನ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 1 =
Remember me
