ಬೆಂಗಳೂರು:‘ಚಂದ್ರನಿಂದ ಬಂದ ಮೊದಲ ಚಿತ್ರ’ ಎಂದು ವಿರೂಪಗೊಳಿಸಿದ ಚಾಯ್​ವಾಲಾನ ಚಿತ್ರವೊಂದನ್ನು ನಟ ಪ್ರಕಾಶ್ ರಾಜ್ ನಿನ್ನೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದು ವೈರಲ್​ ಆಗಿದ್ದಲ್ಲದೆ ವಿವಾದಾತ್ಮಕವಾಗಿ ಪರಿಣಮಿಸಿ ತೀವ್ರ ಟೀಕೆಗೂ ಒಳಗಾಗಿದೆ.
ಆದರೆ ಇದೀಗ ಅವುಗಳಿಗೆಲ್ಲ ಕ್ಯಾರೇ ಎನ್ನದ ಪ್ರಕಾಶ್ ರಾಜ್ ಮತ್ತೊಂದು ಎಕ್ಸ್ ಮಾಡಿ ಟೀಕಿಸಿದ್ದವರನ್ನು ಕೆಣಕಿದ್ದಾರೆ. ‘ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುವುದು. ನಾನು ನಮ್ಮ ಕೇರಳದ ಚಾಯ್​ವಾಲಾರನ್ನು ಸಂಭ್ರಮಿಸುವ ಆರ್ಮ್​ಸ್ಟ್ರಾಂಗ್ ಕಾಲದ ಜೋಕನ್ನು ಹೇಳಿದ್ದೆ. ಟ್ರೋಲಿಗರಿಗೆ ಕಂಡ ಚಾಯ್​ವಾಲಾ ಯಾರು?’ ಎಂದು ಪ್ರಶ್ನಿಸಿದ ಪ್ರಕಾಶ್ ರಾಜ್​, ‘ನಿಮಗೆ ಜೋಕ್ ಅರ್ಥ ಆಗಲಿಲ್ಲವೆಂದರೆ ಜೋಕು ನಿಮ್ಮ ಬಗ್ಗೆಯೇ.. ಬೆಳೆಯಿರಿ’ ಎಂದು ಟೀಕಿಸಿದವರಿಗೆ ಹೇಳಿದ್ದಾರೆ.
ಇದನ್ನೂ ಓದಿ:ಆಣೆ ಮಾಡುವ ಹಂತಕ್ಕೆ ತಲುಪಿತು ಸೌಜನ್ಯಾ ಪ್ರಕರಣ; ಇಬ್ಬರ ಮಧ್ಯೆ ಆರೋಪ, ದೇವರ ಮುಂದೆ ಪ್ರಮಾಣ!
ಪ್ರಕಾಶ್​ ರಾಜ್ ನಿನ್ನೆ ಮಾಡಿದ್ದ ಆ ಪೋಸ್ಟ್​ಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಇದು ಇಸ್ರೋಗೆ ಮಾಡಿದ ಅವಮಾನ, ದೇಶಕ್ಕೆ ಮಾಡಿದ ಅಪಮಾನ ಎಂದು ಹಲವರು ಪ್ರಕಾಶ್ ರಾಜ್ ವಿರುದ್ಧ ಕಿಡಿಕಾರಿದ್ದರು. ಇಂದೂ ಟೀಕೆಗಳು ಮುಂದುವರಿದಿದ್ದು, ಅದಕ್ಕೆ ಪ್ರತಿಕ್ರಿಯೆ ಎಂಬಂತೆ ಪ್ರಕಾಶ್​ ರಾಜ್​ ಈ ಪೋಸ್ಟ್ ಮಾಡಿದ್ದಾರೆ.
Hate sees only Hate.. i was referring to a joke of#Armstrongtimes .. celebrating our kerala Chaiwala .. which Chaiwala did the TROLLS see ?? .. if you dont get a joke then the joke is on you .. GROW UP#justaskinghttps://t.co/NFHkqJy532— Prakash Raj (@prakashraaj)August 21, 2023
Hate sees only Hate.. i was referring to a joke of#Armstrongtimes .. celebrating our kerala Chaiwala .. which Chaiwala did the TROLLS see ?? .. if you dont get a joke then the joke is on you .. GROW UP#justaskinghttps://t.co/NFHkqJy532
ಚಂದ್ರನಿಂದ ಬಂದ ಮೊದಲ ಚಿತ್ರ ಎಂದು ‘ಚಾಯ್​ವಾಲಾ’ನ ಫೋಟೋ ಹಂಚಿಕೊಂಡ ನಟ ಪ್ರಕಾಶ್ ರಾಜ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 14 =
Remember me
