ನವದೆಹಲಿ:ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿಯವರ ಆರೋಗ್ಯ ಮತ್ತಷ್ಟು ಬಿಗಡಾಯಿದ್ದು, ವೆಂಟಿಲೇಟರ್​ ಬೆಂಬಲದಲ್ಲೇ ದೆಹಲಿಯ ಆರ್ಮಿ ರೀಸರ್ಚ್​ ಆ್ಯಂಡ್​ ರೆಫೆರ್ರಲ್​ (ಆರ್​ಆ್ಯಂಡ್​ಆರ್​) ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ತೀವ್ರ ಅನಾರೋಗ್ಯದಿಂದಾಗಿ ಪ್ರಣಬ್​ ಮುಖರ್ಜಿ ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಸರ್ಜರಿ ಮಾಡಲಾಗಿದ್ದು, ಬಳಿಕ ವೆಂಟಿಲೇಟರ್​ನಲ್ಲಿಟ್ಟು ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಇದಲ್ಲದೆ ಪ್ರಣಬ್​ ಅವರಿಗೆ ಕರೊನಾ ಪಾಸಿಟಿವ್​ ಸಹ ಇರುವುದು ಮತ್ತಷ್ಟು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
ಆರ್ಮಿ ಆರ್​ ಆ್ಯಂಡ್​ ಆರ್​ ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಣಾಬ್​​ ಆರೋಗ್ಯ ಸ್ಥಿತಿ ಬಗ್ಗೆ ಮಾತನಾಡಿದ್ದು, ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ. ಬದಲಾಗಿ ಮತ್ತಷ್ಟು ಕ್ಷೀಣಿಸುತ್ತಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.
ಬಹುಶಿಸ್ತೀಯ ವೈದ್ಯರ ತಂಡ ಪ್ರಣಬ್​ ಅವರನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಇನ್ನು ಪ್ರಣಬ್​ ಅವರು ತಮ್ಮ ಶೌಚಗೃಹದಲ್ಲಿ ಆಕಸ್ಮಿಕವಾಗಿ ಬಿದ್ದಿದ್ದರಿಂದ ಮಿದುಳಿನಲ್ಲಿ ಹೆಪ್ಪುಗಟ್ಟಿದೆ ಎಂದು ಹೇಳಲಾಗುತ್ತಿದೆ.
ನಿನ್ನೆ ಬೆಳಗ್ಗೆಯಷ್ಟೇ ಟ್ವೀಟ್ ಮಾಡಿದ್ದ ಪ್ರಣಬ್ ಮುಖರ್ಜಿ, ನಾನು ಬೇರೆ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದೆ. ಇಂದು ಕೊವಿಡ್​-19 ಟೆಸ್ಟ್​ಗೆ ಒಳಗಾದಾಗ ಅದರ ವರದಿ ಪಾಸಿಟಿವ್​ ಬಂದಿದೆ ಎಂದು ಹೇಳಿದ್ದರು.
ಪ್ರಣಬ್​ ಮುಖರ್ಜಿ ಬೇಗ ಚೇತರಿಸಿಕೊಳ್ಳಲಿ ಎಂದು ಕಾಂಗ್ರೆಸ್​ ಮುಖಂಡರಾದ ರಾಹುಲ್​ ಗಾಂಧಿ, ಕೇಂದ್ರ ಸಚಿವ ಪಿಯೂಷ್​ ಗೋಯಲ್​, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಹಾರೈಸಿದ್ದು, ಇಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.(ಏಜೆನ್ಸೀಸ್​)
ಮಿದುಳು ಸರ್ಜರಿಗೆ ಒಳಗಾಗಿರುವ ಪ್ರಣಬ್​ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + two =
Remember me
