ನವದೆಹಲಿ:ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಚುನಾವಣಾ ತಂತ್ರಗಾರ ಹಾಗೂ ರಾಜಕೀಯ ಚಾಣಕ್ಯ ಪ್ರಶಾಂತ್ ಕಿಶೋರ್ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
‘ತಾವು ಇನ್ನುಂದೆ ರಾಜಕೀಯ ಪಕ್ಷಗಳಿಗೆ ಚುನಾವಣಾ ತಂತ್ರಗಾರಿಕೆ ಹೇಳಿಕೊಡುವ ಕೆಲಸದಿಂದ ಹಿಂದೆ ಸರಿಯುವುದಾಗಿ” ಪ್ರಶಾಂತ್ ಕಿಶೋರ್ ಭಾನುವಾರ ಹೇಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ.
‘ನಾನು ಈಗ ಏನು ಮಾಡುತ್ತಿದ್ದೇನೋ ಅದನ್ನು ಇಲ್ಲಿಗೆ ನಿಲ್ಲಿಸುವುದು ಸೂಕ್ತ ಎನಿಸುತ್ತಿದೆ. ಇಲ್ಲಿಗೆ ಸಾಕು. ಮುಂದೆ ಜೀವನದಲ್ಲಿ ಬೇರೆ ಏನನ್ನಾದರೂ ಮಾಡುವ ಇರಾದೆ ಇದೆ. ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ನನಗೆ ಖುಷಿ ತರಿಸಿದೆ. ಇದು ಇಲ್ಲಿಗೆ ಸಾಕು. ಈ ಕೆಲಸದಿಂದ ನಿವೃತ್ತಿ ತೆಗೆದುಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.
ಅಲ್ಲದೇ ಕೇಂದ್ರ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಚುನಾವಣೆ ವಿಷಯದಲ್ಲಿ ತಪ್ಪಾಗಿ ನಡೆದುಕೊಂಡಿದೆ. ಎಲ್ಲ ರೀತಿಯ ಸಹಾಯವನ್ನು ಅದು ಬಿಜೆಪಿಗೆ ಮಾಡಿತ್ತು ಎಂದು ಕೂಡ ಕಿಶೋರ್ ಗಂಭೀರ ಆರೋಪ ಮಾಡಿದ್ದಾರೆ.
ಇನ್ನು ಚುನಾವಣೆ ಮುಂಚೆ ಪ್ರಶಾಂತ್ ಕಿಶೋರ್ ಅವರು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿಯ ಫಲಿತಾಂಶ ದಾಟುವುದಿಲ್ಲ. ಒಂದು ವೇಳೆ ದಾಟಿದರೇ ನಾನು ನನ್ನ ಕೆಲಸದಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿದ್ದರು. ಇದೀಗ ಅವರ ಭವಿಷ್ಯ ನಿಜವಾಗಿದ್ದು ಅವರು ಮಾಡಿದ್ದ ಟ್ವೀಟ್ ಟ್ರೆಂಡಿಂಗ್ ಆಗಿದೆ.
For all the hype AMPLIFIED by a section of supportive media, in reality BJP will struggle to CROSS DOUBLE DIGITS in#WestBengal
PS: Please save this tweet and if BJP does any better I must quit this space!
— Prashant Kishor (@PrashantKishor)December 21, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 19 =
Remember me
