ಬೆಂಗಳೂರು:ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದೆ. 2021ರ ಏಪ್ರಿಲ್​-ಮೇ ತಿಂಗಳಲ್ಲಿ ಅಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಅದರ ಕಾವು ಶುರುವಾಗಿದೆ. ಬಿಜೆಪಿ ಪ್ರಚಾರ ಅಭಿಯಾನ ಆರಂಭಿಸಿದ್ದು, ಅಧಿಕಾರ ಚುಕ್ಕಾಣಿ ಹಿಡಿಯುವುದಕ್ಕೆ ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡತೊಡಗಿದೆ. ಪರಿಣಾಮ, ಆಡಳಿತಾರೂಢ ತೃಣಮೂಲ ಕಾಂಗ್ರಸ್ ಕಾರ್ಯಕರ್ತರಿಂದ ಪ್ರಬಲ ವಿರೋಧ, ಹಿಂಸಾತ್ಮಕ ಪ್ರತಿರೋಧಗಳೂ ವ್ಯಕ್ತವಾಗುತ್ತಿದೆ ಕೂಡ. ಇವೆಲ್ಲದರ ನಡುವೆ ಇಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ಟ್ವೀಟ್ ಗಮನಸೆಳೆದಿದೆ.
ಚಾಣಕ್ಯ ಎಂದೇ ಬಿಜೆಪಿವಲಯದಲ್ಲಿ ಬಿಂಬಿಸಲ್ಪಟ್ಟಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸ ಮುಗಿಸಿ ದೆಹಲಿಗೆ ಹಿಂತಿರುಗಿದ ಬೆನ್ನಲ್ಲೇ ಪ್ರಶಾಂತ್ ಕಿಶೋರ್ (ಪಿಕೆ) ಈ ಟ್ವೀಟ್ ಮಾಡಿದ್ದಾರೆ. ಈ ಸಲದ ವಿಧಾನ ಸಭಾ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷ ಗೆಲುವು ದಾಖಲಿಸಬೇಕು ಎಂಬ ಗುರಿಯನ್ನು ಬಿಜೆಪಿ ಕಾರ್ಯಕರ್ತರಿಗೆ ಅಮಿತ್ ಷಾ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಎಂಬಂತಿದೆ ಪಿಕೆ ಮಾಡಿರುವ ಟ್ವೀಟ್​.
ಇದನ್ನೂ ಓದಿ:ಹಣಕ್ಕಾಗಿ ಮನುಷ್ಯತ್ವವನ್ನೇ ಮರೆತ ರಾಕ್ಷಸ ಯುವಕ: ಈತನ ಹಿನ್ನೆಲೆ ಕೇಳಿದ್ರೆ ಬೆಚ್ಚಿ ಬೀಳ್ತೀರಿ!
ಒಂದು ವರ್ಗದ ಮಾಧ್ಯಮಗಳು ಹುಚ್ಚೆಬ್ಬಿಸಿದಂತೆ ಮಾಡುತ್ತಿರುವ ಪ್ರಚಾರವಷ್ಟೇ ಇದು. ವಾಸ್ತವದಲ್ಲಿ ನೋಡಿದರೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ಸ್ಥಾನ ದಾಟುವುದೂ ಕಷ್ಟವಿದೆ. ಈ ಟ್ವೀಟ್​ ಅನ್ನು ಸೇವ್ ಮಾಡಿ ಇಟ್ಟುಕೊಂಡಿರು. ಒಂದೊಮ್ಮೆ ಬಿಜೆಪಿ ಇದಕ್ಕಿಂತ ಉತ್ತಮ ಸಾಧನೆ ತೋರಿದರೆ ನಾನು ಈ ಜಾಗವನ್ನು ಖಾಲಿ ಮಾಡುವೆ!- ಎಂಬರ್ಥದ ಟ್ವೀಟ್​ ಪಿಕೆ ಖಾತೆಯಲ್ಲಿ ಅಪ್ಡೇಟ್ ಆಗಿದೆ.
For all the hype AMPLIFIED by a section of supportive media, in reality BJP will struggle to CROSS DOUBLE DIGITS in#WestBengal
PS: Please save this tweet and if BJP does any better I must quit this space!
— Prashant Kishor (@PrashantKishor)December 21, 2020

ಮೂರು ತಿಂಗಳಲ್ಲಿ 25,000 ಕೋಟಿ ರೂಪಾಯಿ ಸಂಗ್ರಹಿಸಲಿವೆ ಸಾರ್ವಜನಿಕ ಬ್ಯಾಂಕುಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 17 =
Remember me
