ನವದೆಹಲಿ:ಡಿಜೆ ಮ್ಯೂಸಿಕ್​ ಸೌಂಡ್​ ಕಡಿಮೆ ಮಾಡುವಂತೆ ಹೇಳಿದ ಗರ್ಭಿಣಿ ಮೇಲೆ ನೆರೆಯ ಮನೆಯವರು ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ,ಮಹಿಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯ ಹೆಸರು ರಂಜು(30) ಎಂದು ತಿಳಿದು ಬಂದಿದ್ದು ಪ್ರಕರಣ ಸಂಬಂಧ ಆರೋಪಿಗಳಾದ ಅಮಿತ್​ ಹಾಗೂ ಹರೀಶ್​ನನ್ನು ವಶಕ್ಕೆ ಪಡೆದಿದ್ದರು.
ಘಟನೆಯ ನಂತರ ಮಹಿಳೆಯನ್ನು ಸಿರಸ್​​ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದರು.
ಶನಿವಾರ ಸಂಜೆ ಕರೆ ಮಾಡಿದ ವೈದ್ಯರು ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿರುವುದಾಗಿ ತಿಳಿಸಿದರು ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಮ್ಯೂಸಿಕ್​ ಸೌಂಡ್​ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಗೆ ಗುಂಡೇಟು!
ಡಿಜೆ ಮ್ಯೂಸಿಕ್​ ಸೌಂಡ್​ ಕಡಿಮೆ ಮಾಡುವಂತೆ ಹೇಳಿದ ಮಹಿಳೆ ಮೇಲೆ ನೆರೆಯ ಮನೆಯವರು ಗುಂಡು ಹಾರಿಸಿದ್ದರು. ಪ್ರಕರಣ ಸಂಬಂಧ ಆರೋಪಿಗಳಾದ ಅಮಿತ್​ ಹಾಗೂ ಹರೀಶ್​ನನ್ನು ವಶಕ್ಕೆ ಪಡೆದಿದ್ದರು.
ಆರೋಪಿಗಳಾದ ಹರೀಶ್​ ಹಾಗೂ ಅಮಿತ್​ ವಿರುದ್ಧ ಭಾರತ ದಂಡ ಸಂಹಿತೆ(IPC Section) 302(ಕೊಲೆ), 34(ಸಾಮಾನ್ಯ ಉದ್ದೇಶ), 27(ಶಸ್ತ್ರಾಸ್ತ್ರ ಕಾಯ್ದೆ) ಅಡಿ ಪ್ರಕರಣವನ್ನು ದಾಖಲಿಸಿಕೊಂಡು ಕಠಿಣ ಕಾರಾಗೃಹ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಡಿಸಿಪಿ ರವಿಕುಮಾರ್​ ಸಿಂಗ್​ ತಿಳಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − four =
Remember me
