ಪಶ್ಚಿಮ ಬಂಗಾಳ:ಅಲಿಪುರ್ದೂರ್ ಜಿಲ್ಲೆಯ ಚಪ್ರಮರಿ ಮೀಸಲು ಅರಣ್ಯದಲ್ಲಿ ಗರ್ಭಿಣಿ ಆನೆಯೊಂದಕ್ಕೆ ಗೂಡ್ಸ್ ರೈಲು ಡಿಕ್ಕಿ ಹೊಡೆದು ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ.
ಮಾಹಿತಿ ಪ್ರಕಾರ, ಬೆಳಗಿನ ಜಾವ 3 ಗಂಟೆಗೆ ಗೂಡ್ಸ್ ರೈಲು ಚಪ್ರಮರಿ ಮೀಸಲು ಅರಣ್ಯದ ಮೂಲಕ ಹಾದು ಹೋಗುತ್ತಿದ್ದಾಗ ಗೂಡ್ಸ್ ರೈಲು ಆನೆಗೆ ಡಿಕ್ಕಿ ಹೊಡೆದಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ, ಆನೆಯ ಹೊಟ್ಟೆಯಲ್ಲಿದ್ದ ಮರಿ ಕೂಡಾ ತಾಯಿ ಆನೆ ಜತೆಗೆ ಕೊನೆಯುಸಿರೆಳದಿದೆ. ಸಾವನ್ನಪ್ಪಿರುವ ಆನೆಯನ್ನು ಗೂಡ್ಸ್ ರೈಲು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿದೆ.
ಇದನ್ನೂ ಓದಿ:ಮಗ ಸಿಎ ಪರೀಕ್ಷೆಯಲ್ಲಿ ಫೇಲ್ ಆದ ಎಂದು ಪ್ರಾಣ ಬಿಟ್ಟ ತಾಯಿ
ಘಟನೆ ನಡೆದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿದ್ದು. ಮರಣೋತ್ತರ ಪರೀಕ್ಷೆಯ ನಂತರ ತಾಯಿ ಮತ್ತು ಆನೆಯ ಭ್ರೂಣವನ್ನು ಅಂತ್ಯಕ್ರಿಯೆ ನಡೆಸಲಾಗಿದೆ. ದೇಶದ ಆನೆಗಳ ಜನಸಂಖ್ಯೆಯ ಸುಮಾರು 2% ನಷ್ಟು ನೆಲೆಯಾಗಿರುವ ಪಶ್ಚಿಮ ಬಂಗಾಳದಲ್ಲಿ ಇಂತಹ ಘಟನೆಗಳು ಹೆಚ್ಚಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ:ಟಿವಿ ಸೆಟ್ ಟಾಪ್​​​​ ಬಾಕ್ಸ್​​ನಿಂದ ವಿದ್ಯುತ್​​ ಶಾಕ್​​​ ತಗುಲಿ 4 ವರ್ಷದ ಬಾಲಕ ಮೃತ್ಯು
ರಾತ್ರಿ ವೇಳೆ ಡಾಲಮೈಟ್​​ನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ರೈಲು ಗರ್ಭಿಣಿ ಆನೆಗೆ ಡಿಕ್ಕಿ ಹೊಡೆದಿದೆ. ಆದರೆ ಭಾರತೀಯ ರೈಲ್ವೇ ಇಲಾಖೆಯ ನಿಯಮದ ಪ್ರಕಾರ, ರಾತ್ರಿ ಹೊತ್ತು ಗೂಡ್ಸ್ ರೈಲುಗಳು ಓಡಾಡುವಂತಿಲ್ಲ. ಸರಕು ರೈಲುಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ, ಜತೆಗೆ ವೇಗದ ನಿರ್ಬಂಧಗಳೂ ಇವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೇಂದ್ರ ಜಾಖರ್ ತಿಳಿಸಿದ್ದಾರೆ.
ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದ ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ; ಇಬ್ಬರು ಮೃತ್ಯು, ಮೂರು ಮಕ್ಕಳಿಗೆ ಗಂಭೀರ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − fourteen =
Remember me
