ಭುವನೇಶ್ವರ: ಕೆಲವೊಮ್ಮೆ ವಿಚಿತ್ರ ಮತ್ತು ವಿಕೃತ ಪ್ರಕರಣಗಳನ್ನು ನಾವು ಕೇಳಿರುತ್ತೇವೆ. ವ್ಯಕ್ತಿಯೊಬ್ಬ ತನ್ನ ಮನೆಯ ಪಕ್ಕದಲ್ಲೇ ವಾಸವಾಗಿರುವ ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ್ದು, ಇದಕ್ಕೆ ಆತನ ಪತ್ನಿಯೂ ಸಾಥ್ ನೀಡಿದ್ದಾಳೆ. ಈ ಘಟನೆ ಒಡಿಶಾದ ನಬರಂಗಪುರ ಜಿಲ್ಲೆಯಲ್ಲಿ ನಡೆದಿದೆ.
ಜಗನ್ನಾತ್‍ಪುರ ಗ್ರಾಮದ ಖಾಟಿಗುಡ್ಡ ಪ್ರದೇಶದ ನಿವಾಸಿಯಾಗಿರುವ ಗರ್ಭಿಣಿ, ಪದ್ಮ ರುಂಜಿಕರ್ ಅವರ ಬಳಿ ರೆಗ್ಯಲುರ್ ಚೆಕಪ್ ಮಾಡಿಸಿಕೊಳ್ಳುತ್ತಿದ್ದರು. ಅಂತೆಯೇ ಇತ್ತೀಚೆಗೆ ಕೂಡ ಸಂತ್ರಸ್ತೆ ಚೆಕಪ್‍ಗೆಂದು ತೆರಳಿದ್ದರು. ಈ ವೇಳೆ ಪದ್ಮ ಅವರ ಪತಿ ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಪತಿಗೆ ಪತ್ನಿ ಪದ್ಮ ರುಂಜಿಕರ್ ಕೂಡ ಸಹಾಯ ಮಾಡಿದ್ದಾಳೆ. ಅಲ್ಲದೆ ಪತಿ ರೇಪ್ ಮಾಡುತ್ತಿರುವುದನ್ನು ತನ್ನ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾಳೆ. ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ.
ಇದನ್ನೂ ಓದಿ:ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ 10ರೂ. ನೀಡಿದ 60 ವರ್ಷದ ಅಜ್ಜ!
ಅತ್ಯಾಚಾರವೆಸಗಿದ ಬಳಿಕ ದಂಪತಿ ಸಂತ್ರಸ್ತೆಯನ್ನು ಸ್ಥಳೀಯ ದೇವಸ್ಥಾನಕ್ಕೆ ಕರೆದೊಯ್ದು ಘಟನೆಯನ್ನು ಯಾರಿಗೂ ವಿವರಿಸದಂತೆ ಆಣೆ ಪ್ರಮಾಣ ಮಾಡಿಸಿ ಬೆದರಿಕೆ ಹಾಕಿದ್ದಾರೆ. ಆದರೆ ಮಹಿಳೆ ಪೊಲೀಸರಿಗೆ ಈ ಬಗ್ಗೆ ದೂರು ನಿಡಿದ್ದು, ಸದ್ಯ ಆರೋಪಿ ಹಾಗೂ ಆತನ ಪತ್ನಿಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ವಿಶ್ವ ನಿದ್ರಾ ದಿನ 2023; ನಿದ್ದೆ ಮಾಡಲು ಉದ್ಯೋಗಿಗಳಿಗೆ ಇಂದು ರಜೆ ನೀಡಿದ ಕಂಪನಿ!
ವೈಯಕ್ತಿಕ ಕಾರಣದಿಂದಲೇ ಈ ಕೃತ್ಯ ಎಸಗಿರುವುದಾಗಿ ಪ್ರಾಥಮಿಕ ತನಿಖೆ ವೇಳೆ ಬೆಳಕಿಗೆ ಬಂದಿದೆ. ದಂಪತಿ ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್​​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
100ಕ್ಕೂ ಹೆಚ್ಚು ಬಾರಿ ಇರಿದು ಈತನ ಕಥೆ ಮುಗಿಸಿದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 11 =
Remember me
