ನವದೆಹಲಿ:ಶುಲ್ಲಕ ಕಾರಣಕ್ಕೆ ಪತಿ-ಪತ್ನಿಯ ನಡುವೆ ಜಗಳ ನಡೆದಿದ್ದು, ಸಿಟ್ಟಿಗೆದ್ದು ಪತ್ನಿಯನ್ನು ಮಂಚಕ್ಕೆ ಕಟ್ಟಿ ಬೆಂಕಿ ಹಚ್ಚಿ ಕೊಂದಿದ್ದಾನೆ. ಈ ಘಟನೆ ಪಂಜಾಬ್‌ನ ಅಮೃತಸರದಲ್ಲಿ ನಡೆದಿದೆ.
ಮೃತ ಮಹಿಳೆಯ ಹೆಸರು ಪಿಂಕಿ (23) ಎಂದು ಹೇಳಲಾಗಿದ್ದು, ಆರೋಪಿ ಪತಿಯ ಹೆಸರು ಸುಖದೇವ್. ಅಮೃತಸರ ಸಮೀಪದ ಬುಲ್ಲೇನಂಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಡೆದಿದ್ದೇನು?:ಶುಕ್ರವಾರ ಇಬ್ಬರ ನಡುವೆ ಮತ್ತೆ ತೀವ್ರ ವಾಗ್ವಾದ ನಡೆದಿದ್ದು, ಕೋಪಗೊಂಡ ಪತಿ ಪತ್ನಿಯನ್ನು ಮಂಚಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದಾನೆ. 23 ವರ್ಷದ ಮಹಿಳೆ 6 ತಿಂಗಳ ಗರ್ಭಿಣಿಯಾಗಿದ್ದಳು. ಸುಖದೇವ್ ಮತ್ತು ಪಿಂಕಿ ಸಂಬಂಧ ಹಳಸಿತ್ತು ಮತ್ತು ಪರಸ್ಪರ ಜಗಳವಾಡುತ್ತಿದ್ದರು. ಯಾವುದೋ ಸಣ್ಣ ವಿಚಾರಕ್ಕೆ ದಂಪತಿ ನಡುವೆ ತೀವ್ರ ವಾಗ್ವಾದ ನಡೆದಿದ್ದು, ನಂತರ ಕೋಪದಿಂದ ಪತಿ ಮಹಿಳೆಯನ್ನು ಹಾಸಿಗೆಗೆ ಕಟ್ಟಿ ಬೆಂಕಿ ಹಚ್ಚಿದ್ದಾನೆ. ಪಿಂಕಿ ಬೆಂಕಿಯ ಕೆನ್ನಾಲಿಗೆಯಲ್ಲಿ ಹೊತ್ತಿಯುರಿಯುತ್ತಿರುವುದನ್ನು ನೋಡಿ ನಂತರ ಸುಖದೇವ್ ಸ್ಥಳದಿಂದ ಓಡಿಹೋಗಿದ್ದಾನೆ.
Appalled by the horrifying incident in Amritsar where a man allegedly set his pregnant wife on fire. The brutality of this act is unimaginable. Hon’ble Chairperson NCW@sharmarekhahas written a letter to DGP Punjab to arrest the perpetrator and submit an action report in three…
— NCW (@NCWIndia)April 20, 2024

ರಾಷ್ಟ್ರೀಯ ಮಹಿಳಾ ಆಯೋಗವೂ (ಎನ್‌ಸಿಡಬ್ಲ್ಯು) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಪಂಜಾಬ್ ಪೊಲೀಸರಿಂದ ವಿವರವಾದ ವರದಿಯನ್ನು ಕೇಳಿದೆ. ರಾಷ್ಟ್ರೀಯ ಮಹಿಳಾ ಆಯೋಗವು ಈ ಭೀಕರ ಘಟನೆಯನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಖಂಡಿಸಿದೆ ಮತ್ತು ಕ್ರೌರ್ಯವನ್ನು ಕಲ್ಪಿಸಿಕೊಳ್ಳಲಾಗದು ಎಂದು ವಿವರಿಸಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿ ಪತಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾವುದೇ ಶಿಕ್ಷೆ ನೇಹಾಳನ್ನು ತಿರುಗಿ ತರಲಾಗದು, ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ? ; ನಟ ಕಿಶೋರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 6 =
Remember me
