ಮುಂಬೈ:ಆಸ್ಪತ್ರೆಗೆ ತೆರಳಲು ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್​ ಬಾರದ ಕಾರಣ ಗರ್ಭಿಣಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ನಡೆದಿದೆ.
ಮಹಿಳೆಯನ್ನು ಡೋಲಿಯಲ್ಲಿ ಹೊತ್ತುಕೊಂಡು ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಇದನ್ನೂ ಓದಿ:VIDEO| ಮಹಿಳಾ ಪೊಲೀಸ್​ಗೆ ಕಿರುಕುಳ; ಅಪ್ರಾಪ್ತ ವಯಸ್ಕ ಸೇರಿದಂತೆ ಮೂವರು ಅರೆಸ್ಟ್​
ಈ ಕುರಿತು ಪ್ರತಿಕ್ರಿಯಿಸಿರುವ ಆಶಾ ಕಾರ್ಯಕರ್ತರೊಬ್ಬರು, ಬೆಳಗಿನ ಜಾವ ಸುಮಾರಿಗೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಡೋಲಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸರಿಯಾದ ರಸ್ತೆ ಇಲ್ಲದ ಕಾರಣ ಸರಿಯಾದ ಸಮಯಕ್ಕೆ ಅಂಬುಲೆನ್ಸ್​​ ಬಾರದ ಕಾರಣ ಮಹಿಳೆಗೆ ರಸ್ತೆಯಲ್ಲೇ ಹೆರಿಗೆ ಆಗಿದೆ ಎಂದು ಆಶಾ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಏಕನಾಥ್​ ಶಿಂಧೆ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಮಯದಲ್ಲಿ ತಮ್ಮ ಗ್ರಾಮವನ್ನು ದತ್ತು ಪಡೆದಿದ್ದರು. ಆದರೆ, ಯಾವುದೇ ಕಾಮಗಾರಿಗಳು ನಡೆದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇನ್ನು ವಿಡಿಯೋ ಆದ ಬೆನ್ನಲ್ಲೇ ಘಟನೆ ಕುರಿತು ಕಿಡಿಕಾರಿರುವ ನೆಟ್ಟಿಗರು ಮೂಲಭೂತ ಸೌಕರ್ಯ ಕಲ್ಪಿಸದೆ ಜನರು ಹೇಗೆ ಮತ ಹಾಕುತ್ತಿದ್ದಾರೆ ಎಂಬುದು ನಮಗೆ ಅರ್ಥವಾಗಿಲ್ಲ ಎಂದು ಕಮೆಂಟ್​ ಮಾಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × four =
Remember me
