ನವದೆಹಲಿ:ಚೀನಾದಲ್ಲಿ ಕೊರೊನಾ ವೈರಸ್​ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆ ದೇಶದಲ್ಲಿರುವ ಬೇರೆ ದೇಶಗಳ ಜನರೂ ಸಹ ಆತಂಕ ಪಡುವಂತಾಗಿದೆ. ಅಷ್ಟೇ ಅಲ್ಲದೆ ಚೀನಾಕ್ಕೆ ಭೇಟಿ ಕೊಟ್ಟು ತಮ್ಮ ದೇಶಗಳಿಗೆ ಮರಳಿದವರ ಆರೋಗ್ಯದ ಮೇಲೆ ಆಯಾ ದೇಶಗಳ ಆಡಳಿತಗಳು ನಿಗಾ ವಹಿಸಿವೆ.
ಚೀನಾದಲ್ಲಿ ಹುಬೈ, ವುಹಾನ್​ ಸೇರಿ ಹಲವು ಪ್ರದೇಶಗಳಲ್ಲಿ ಈ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು ಅಂತಹ ಸೂಕ್ಷ್ಮ ನಗರಗಳನ್ನು ಈಗಾಗಲೇ ನಿರ್ಬಂಧಿಸಲಾಗಿದೆ.
ಹುಬೈ ಪ್ರಾಂತ್ಯದಲ್ಲಿ ವುಹಾನ್​ ಸೇರಿ ಒಟ್ಟು 17 ಪ್ರಾಂತ್ಯಗಳಲ್ಲಿ ಕೊರೊನಾ ವೈರಸ್ ಸೋಂಕು ದಿನೇದಿನೇ ಹೆಚ್ಚುತ್ತಿರುವುದರಿಂದ ಅಲ್ಲಿರುವ ಭಾರತೀಯರನ್ನು ಸ್ಥಳಾಂತರಿಸುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ. ಈ ಬಗ್ಗೆ ಭಾರತ ವಿದೇಶಾಂಗ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ.
ಸಚಿವಾಲಯದ ವಕ್ತಾರ ರವೀಶ್​ ಕುಮಾರ್​ ಮಾತನಾಡಿ, ಬೀಜಿಂಗ್​ನಲ್ಲಿರುವ ಭಾರತದ ರಾಯಭಾರ ಕಚೇರಿ ಚೀನಾದ ಸರ್ಕಾರ ಜತೆ ಸಂಪರ್ಕದಲ್ಲಿದೆ. ಹುಬೈ ಪ್ರಾಂತ್ಯದಲ್ಲಿರುವ ವಿದ್ಯಾರ್ಥಿಗಳು ಸೇರಿ ಎಲ್ಲ ಭಾರತೀಯರನ್ನು ಅಲ್ಲಿಂದ ಸ್ಥಳಾಂತರಿಸುವ ಕಾರ್ಯವನ್ನು ಈಗಾಗಲೇ ಪ್ರಾರಂಭ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಹಾಗೇ ಕಾಲಕಾಲಕ್ಕೆ ಮಾಹಿತಿಗಳನ್ನು ಅಪ್​ಡೇಟ್​ ಮಾಡುತ್ತೇವೆ ಎಂದೂ ಹೇಳಿದ್ದಾರೆ.
ಸದ್ಯ ಭಾರತೀಯ ಧ್ವಜವನ್ನು ಹೊತ್ತಿರುವ ಏರ್​ ಇಂಡಿಯಾ ವಿಮಾನವೊಂದು ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಕ್ಕಾಗಿ ಚೀನಾಕ್ಕೆ ಹೊರಡಲು ಸಿದ್ಧವಾಗಿದ್ದು, ಅಧಿಕೃತ ಆದೇಶಕ್ಕಾಗಿ ಕಾಯುತ್ತಿದೆ ಎಂದು ಮೂಲಗಳು ತಿಳಿಸಿವೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 5 =
Remember me
