ನವದೆಹಲಿ:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಖಾಸಗಿ ಮಾಧ್ಯಮವೊಂದು ಕೈಗೊಂಡಿರುವ ಚುನಾವಣಾಪೂರ್ವ ಸಮೀಕ್ಷೆಯಲ್ಲಿ ಈ ಅಂಶ ಕಂಡು ಬಂದಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ 25 ಕ್ಷೇತ್ರಗಳು ಎನ್​ಡಿಎ ಮೈತ್ರಿಕೂಟದ ಪಾಲಾಗಲಿದೆ ಎಂದು ಈ ಸಮೀಕ್ಷೆ ತಿಳಿಸಿದೆ.
ದೇಶದ 21 ರಾಜ್ಯಗಳ 518 ಲೋಕಸಭಾ ಕ್ಷೇತ್ರಗಳ ಒಂದು ಲಕ್ಷಕ್ಕೂ ಅಧಿಕ ಮಂದಿಯ ಅಭಿಪ್ರಾಯ ಸಂಗ್ರಹಿಸಿ ಈ ಸಮೀಕ್ಷೆ ನಡೆಸಲಾಗಿದೆ. ಕರ್ನಾ ಟಕದ 28 ಕ್ಷೇತ್ರಗಳ ಪೈಕಿ 25 ಹಾಗೂ ಅಸ್ಸಾಮ್ 14 ಕ್ಷೇತ್ರಗಳ ಪೈಕಿ 12ರಲ್ಲಿ ಎನ್​ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲ್ಲಲಿ ದ್ದಾರೆ. ರಾಜಸ್ಥಾನ ಹಾಗೂ ಉತ್ತರಾಖಂಡದಲ್ಲಿ ಎನ್​ಡಿಎ ಕ್ಲೀನ್​ಸ್ವೀಪ್ ಮಾಡಲಿದೆ ಎಂದು ಸಮೀಕ್ಷೆ ತಿಳಿಸಿದೆ. ತಮಿಳುನಾಡಿನಲ್ಲಿ ಇಂಡಿಯಾ ಒಕ್ಕೂಟದ ಡಿಎಂಕೆ ಮಹತ್ವದ ಪಾತ್ರ ವಹಿಸಲಿದ್ದು, 30 ಸ್ಥಾನಗಳನ್ನು ಗೆಲ್ಲಲಿದೆ ಎಂದೂ ಈ ಸಮೀಕ್ಷೆ ತಿಳಿಸಿದೆ.
ಪಟ್ಟಿ ಪ್ರಕಟಿಸುವಲ್ಲೂ ಮುಂದೆ:ವಿಶೇಷವೆಂದರೆ ಚುನಾವಣಾ ವೇಳಾಪಟ್ಟಿ ಬಿಡುಗಡೆ ಆಗುವ ಮುನ್ನವೇ ಅಭ್ಯರ್ಥಿಗಳನ್ನು ಅಂತಿಮಗೊಳಿಸುವಲ್ಲಿಯೂ ಬಿಜೆಪಿ ಮುಂಚೂಣಿಯಲ್ಲಿದೆ. ಬುಧವಾರ 2ನೇ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ 72 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಇದಕ್ಕೂ ಮುನ್ನ ಮೊದಲ ಪಟ್ಟಿಯಲ್ಲಿ 190ಕ್ಕೂ ಅಧಿಕ ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಪ್ರಕಟಿಸಿತ್ತು. ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ ಪ್ರಮುಖ ವಿಪಕ್ಷವಾದ ಕಾಂಗ್ರೆಸ್ ಹಾಗೂ ಇತರ ಪಕ್ಷಗಳಿಂದ ಬಿಜೆಪಿಗೆ ಪಕ್ಷಾಂತರ ಆದವರ ಸಂಖ್ಯೆಯೂ ಗಣನೀಯವಾಗಿದ್ದು, ಒಂದು ರೀತಿಯಲ್ಲಿ ಬಿಜೆಪಿ ಸೇರ್ಪಡೆ ಪರ್ವ ಸೃಷ್ಟಿ ಆಗಿರುವುದು ಸಮೀಕ್ಷೆಯಲ್ಲಿನ ಅಂಶಗಳಿಗೆ ಪೂರಕವಾಗಿ ಕಂಡುಬಂದಿದೆ.
ದೆಹಲಿಯ 6 ಸಂಸದರ ಕೈಬಿಟ್ಟ ಬಿಜೆಪಿ:ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಅದರಲ್ಲೂ ರಾಷ್ಟ್ರ ರಾಜಧಾನಿಯ ಏಳು ಹಾಲಿ ಸಂಸದರ ಪೈಕಿ ಆರು ಮಂದಿ ಟಿಕೆಟ್ ವಂಚಿತರಾಗಿದ್ದಾರೆ. ಇದಕ್ಕೆ ಜನರಲ್ಲಿನ ಆಡಳಿತ ವಿರೋಧಿ ಭಾವನೆಯೇ ಕಾರಣ ಎಂದೂ ಹೇಳಲಾಗುತ್ತಿದೆ. ದೆಹಲಿಯಲ್ಲಿನ ಎಲ್ಲ ಏಳು ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದ್ದರೂ ಆ ಸಂಸದರ ಪೈಕಿ ಮನೋಜ್ ತಿವಾರಿಯೊಬ್ಬರಿಗಷ್ಟೇ ಟಿಕೆಟ್ ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + nineteen =
Remember me
