ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್​ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್​ ಕೇಜ್ರಿವಾಲ್​ ಅವರನ್ನು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಶುಕ್ರವಾರ ಅಧಿಕೃತವಾಗಿ ನೇಮಕ ಮಾಡಿದರು.
ಅಧಿಸೂಚನೆ ಪ್ರಕಾರ ಮುಖ್ಯಮಂತ್ರಿಗಳು ಸಲಹಾ ಮೇರೆಗೆ ಇತರೆ ಆರು ಶಾಸಕರನ್ನು ದೆಹಲಿ ಸರ್ಕಾರದ ಸಚಿವರನ್ನಾಗಿ ರಾಷ್ಟ್ರಪತಿಗಳು ಇದೇ ವೇಳೆ ನೇಮಕ ಮಾಡಿದ್ದಾರೆ.
ಫೆ. 16ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಅರವಿಂದ್ ಕೇಜ್ರಿವಾಲ್​ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಮನೀಶ್​ ಸಿಸೋಡಿಯಾ, ಸತ್ಯೇಂದರ್​ ಜೈನ್​, ಗೋಪಾಲ್​ ರೈ, ಕೈಲಾಶ್​​ ಗೆಹ್ಲೋಟ್​, ಇಮ್ರಾನ್​ ಹುಸೈನ್​ ಮತ್ತು ರಾಜೇಂದ್ರ ಗೌತಮ್​ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯ ಮುಖ್ಯಮಂತ್ರಿಯಾಗಿ ಶ್ರೀ ಅರವಿಂದ್​ ಕೇಜ್ರಿವಾಲ್ ಅವರನ್ನು ನೇಮಕ ಮಾಡಲು ಸಂತಸವಾಗಿದೆ. ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಸಿಎಂ ಆಗಿ ಕಾರ್ಯಾರಂಭ ಮಾಡಲಿದ್ದಾರೆ ಎಂದು ರಾಷ್ಟ್ರಪತಿಗಳ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್​ ಪ್ರಚಂಡ ಬಹುಮತ ಸಾಧಿಸಿದೆ. ಒಟ್ಟು 70 ಕ್ಷೇತ್ರಗಳಲ್ಲಿ ಬರೋಬ್ಬರಿ 62 ಸ್ಥಾನಗಳಲ್ಲಿ ಗೆಲುವು ದಾಖಲಿಸುವ ಮೂಲಕ ಮೂರನೇ ಬಾರಿಗೆ ದೆಹಲಿ ಗದ್ದುಗೆಯನ್ನು ಆಪ್​ ಏರಿದೆ. ಬಿಜೆಪಿ 8 ಸ್ಥಾನಗಳಲ್ಲಿ ತೃಪ್ತಿಪಟ್ಟುಕೊಂಡರೆ, ಕಾಂಗ್ರೆಸ್​ ಖಾತೆ ತೆರೆಯದೇ ಹೀನಾಯ ಸೋಲು ಅನುಭವಿಸಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
